ಸಂಪುಟದಿಂದ ವಿ.ಕೆ.ಸಿಂಗ್‌ ಕೈಬಿಡಲು ರಾಹುಲ್‌ ಒತ್ತಾಯ

ವಿವಾದಾತ್ಮಕ ಹೇಳಿಕೆ ನೀಡಿದ ಕೇಂದ್ರ ಸಚಿವ ವಿ.ಕೆ.ಸಿಂಗ್‌ ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ.
ಚೀನಾ ಗಡಿಯನ್ನು ಗುರುತಿಸಲು ನಮಗೆ ಸಾಧ್ಯವಾಗಿಲ್ಲ, ಉಭಯ ದೇಶಗಳು ನೈಜ ಗಡಿ ಬಗೆಗಿನ ಗ್ರಹಿಕೆಯನ್ನು ಹಲವು ಬಾರಿ ಮೀರಿವೆ ಎಂದು ಸಿಂಗ್‌ ಹೇಳಿಕೆ ನೀಡುವ ಮೂಲಕ ಚೀನಾ ನಮ್ಮ ದೇಶದ ವಿರುದ್ಧ ಮೊಕದ್ದಮೆ ದಾಖಲಿಸಲು ಅವರು ನೆರೆ ರಾಷ್ಟ್ರಕ್ಕೆ ನೆರವಾಗುತ್ತಿದ್ದಾರೆ ಎಂದು ರಾಹುಲ್‌ ಆರೋಪ ಮಾಡಿದ್ದಾರೆ. ಅವರನ್ನು ಸಚಿವ ಸ್ಥಾನದಿಂದ ಕಿತ್ತೊಗೆಯಬೇಕು ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಸಚಿವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಚೀನಾದ ವಿದೇಶಾಂಗ ಸಚಿವಾಲಯ, ಪೂರ್ವ ಲಡಾಕ್‌ನಲ್ಲಿ ಎಲ್‌ಎಸಿಯ ಉದ್ದಕ್ಕೂ ನಡೆಯುತ್ತಿರುವ ಗಡಿ ಸಂಘರ್ಷಕ್ಕೆ ಭಾರತವನ್ನು ದೂಷಿಸಿದೆ. ಇದು ಉದ್ವಿಗ್ನತೆಗೆ ಮೂಲ ಕಾರಣವಾಗಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್ ಹೇಳಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಸನಾತನ ಧರ್ಮ ಕುರಿತ ಹೇಳಿಕೆ: ಉದಯನಿಧಿ ಸ್ಟಾಲಿನ್‌, ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement