ಏ.24ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ಏ.24ರಂದು ಆಯೋಜಿಸಿರುವ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದ್ದು, ವಿವಾಹವಾಗಲು ಇಚ್ಛಿಸುವವರು ಏ.15ರೊಳಗೆ ಸೂಕ್ತ ದಾಖಲಾತಿಯೊಂದಿಗೆ ಹೆಸರು ನೋಂದಣಿ ಮಾಡುವಂತೆ ಕೋರಲಾಗಿದೆ.
ಏ.29ರಂದು ಸಂಜೆ 6.48ಕ್ಕೆ ಗೋಧೂಳಿ ಲಗ್ನದಲ್ಲಿ ವಿವಾಹಗಳು ನೆರವೇರಲಿದ್ದು, ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ ಹೂವಿನ ಹಾರ ನೀಡಲಾಗುವುದು. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಭರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ವರದಕ್ಷಿಣೆ ಹಾಗೂ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹ ಪ್ರತಿ ವರ್ಷ ನಡೆಯುತ್ತಿದ್ದು, ಈವರೆಗೂ 12,262 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಲ್ಲಿ 2ನೇ ಮದುವೆಗೆ ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗೆ ದೂ: 08256-266644, ವಾಟ್ಸಪ್ ನಂ: 8147263422, 9663464648 ಸಂಪರ್ಕಿಸುವಂತೆ ಕೋರಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement