ಉಪಚುನಾವಣೆಯಲ್ಲಿ ಜೆಡಿಎಸ್‌ ಸ್ಪರ್ಧಿಸಲ್ಲ, ನಮ್ಮ ಬಳಿ ಹಣವಿಲ್ಲ

ರಾಯಚೂರು: ರಾಜ್ಯದ ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭೆ, ಮಸ್ಕಿ, ಸಿಂಧಗಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಮ್ಮ ಬಳಿ ಹಣವಿಲ್ಲ ಎಂದರು.
2023ರ ವಿಧಾನಸಭೆ ಚುನಾವಣೆಗೆ ಸಜ್ಜುಗೊಳಿಸಲು ಪಕ್ಷ ಕಟ್ಟುವ ಕಾರ್ಯದಲ್ಲಿ ಸಂಫೂರ್ಣ ಭಾಗಿಯಾಗುತ್ತೇನೆ. ಕುಮಾರಸ್ವಾಮಿ ಸರ್ಕಾರ ಪತನವಾದ ನಂತರ ಯಾರನ್ನೂ ನಿಂದಿಸಿಲ್ಲ. ಆದರೆ, ನಮ್ಮ ಪ್ರಾದೇಶಿಕ ಪಕ್ಷ ಕಟ್ಟಲು ಶಕ್ತಿ ಮೀರಿ ಪ್ರಯತ್ನ ಮಾಡುವೆ. ರಾಜ್ಯಸರ್ಕಾರ ಅಸ್ಥಿರಗೊಳಿಸುವ ಕಾರ್ಯದಲ್ಲೂ ಭಾಗಿಯಾಗುವುದಿಲ್ಲ ಎಂದರು.

ಸಚಿವರು, ಶಾಸಕರು ಪಕ್ಷ ಬಿಟ್ಟಿರೋದು ಸ್ವಲ್ಪ ಹಿನ್ನೆಡೆಯಾಗಬಹುದು.ಆದ್ರೆ ಮೂರನೇ ಬಾರಿಯೂ ಮಮತಾ ಬ್ಯಾನರ್ಜಿ ಸಿಎಂ ಆಗಲಿದ್ದಾರೆ ಎಂದು ದೇವೇಗೌಡ ಅವರು ಹೇಳಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಮಾಜಿ ಶಾಸಕ ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣ ಪತ್ರ ಪ್ರಕರಣ ಮತ್ತೆ ಮುನ್ನೆಲೆಗೆ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement