ಬೆಂಗಳೂರು,: ಕಳೆದ ೨೪ ತಾಸಿನಲ್ಲಿ ರಾಜ್ಯದಲ್ಲಿ 415 ಜನರಿಗೆ ಸೋಂಕು ದೃಡಪಟ್ಟಿದೆ. 322 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ , ಮೂವರು ಸೋಂಕಿತರು ಮೃತಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ ಮೂವರು, ಸೋಂಕಿತರು ಕೊರೊನಾದಿಂದ ಮೃತಪಟ್ಟಿದ್ದು ಉಳಿದ ಜಿಲ್ಲೆಗಳಲ್ಲಿ ಕೊರೋನಾ ಮರಣ ಸಂಭವಿಸಿಲ್ಲ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 943627ಕ್ಕೆ ಏರಿದೆ. ರಾಜ್ಯದಲ್ಲಿ ಒಟ್ಟಾರೆ 5875ಸಕ್ರಿಯ ಪ್ರಕರಣಗಳಿವೆ ,141 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಸೋಂಕು ಗಣನೀಯ ಪ್ರಮಾಣದಲ್ಲಿ ತಗ್ಗಿದೆ. ಕಳೆದ 24 ಗಂಟೆಗಳಲ್ಲಿ 208 ಜನರಿಗೆ ಸೋಂಕು ಧೃಡಪಟ್ಟಿದೆ. ಬೆಂಗಳೂರಿನಲ್ಲಿ ಇಂದು142 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ
ನಿಮ್ಮ ಕಾಮೆಂಟ್ ಬರೆಯಿರಿ