ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ ರೆಡ್ಡಿ ಅವರ ಸೋದರಿ ವೈ.ಎಸ್.ಶರ್ಮಿಳಾ ತೆಲಂಗಾಣದಲ್ಲಿ ನೂತನ ಪಕ್ಷ ಆರಂಭಿಸುವ ಸಾಧ್ಯತೆಯಿದೆ.
೨೦೨೩ರಲ್ಲಿ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಕೆ.ಚಂದ್ರಶೇಖರ ರಾವ್ ಅವರ (ಕೆಸಿಆರ್) ಪಕ್ಷಕ್ಕೆ ಪೈಪೋಟಿ ನೀಡಲು ಹೊಸ ಪಕ್ಷ ಆರಂಭಿಸಲು ಚಿಂತನೆ ನಡೆಸಿದ್ದಾರೆ.
ಆಂಧ್ರಪ್ರದೇಶದ ಮಾಜಿ ಸಿಎಂ ವೈ.ಎಸ್.ರಾಜಶೇಖರ ಅವರ ಪುತ್ರಿ ಶರ್ಮಿಳಾ ತೆಲಂಗಾಣದಲ್ಲಿ ಭವಿಷ್ಯದ ಯೋಜನೆ ಕುರಿತು ಚರ್ಚಿಸಲು ತನ್ನ ತಂದೆಯ ನಿಷ್ಠಾವಂತರನ್ನು ಭೇಟಿಯಾಗುತ್ತಿದ್ದಾರೆ. ತೆಲಂಗಾಣದ ಕೆಸಿಆರ್ ಪಕ್ಷದ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಸೋದರನೊಂದಿಗಿನ ವೈಮನಸ್ಸು ಕೂಡ ನೂತನ ಪಕ್ಷ ಆರಂಭಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ