ಮೈಸೂರು: ನಗರದ ಮಹಾರಾಜ ಪದವಿ ಕಾಲೇಜಿನ ಮೇಲ್ಛಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಕಾಲೇಜಿನ ಅಪರಾಧಶಾಸ್ತ್ರ ವಿಭಾಗದಲ್ಲಿ ಉಪನ್ಯಾಸ ನಡೆಯುತ್ತಿರುವ ಸಂದರ್ಭದಲ್ಲಿ ಛಾವಣಿಯ ಭಾಗವೊಂದು ಕುಸಿದು ದುರ್ಘಟನೆ ಸಂಭವಿಸಿದೆ. ವಿದ್ಯಾರ್ಥಿಗಳಾದ ವಿಶಾಲ್, ಯಶವಂತ ಹಾಗೂ ಸಲೀಮ್ ಪಾಶಾ ಗಾಯಗೊಂಡಿದ್ದಾರೆ. ವಿಶಾಲ್ ತಲೆಗೆ ಗಂಭೀರ ಗಾಯವಾಗಿದ್ದು, ಉಳಿದ ಇಬ್ಬರು ವಿದ್ಯಾರ್ಥಿಗಳ ಕೈಗೆ ತರುಚಿದ ಗಾಯಗಳಾಗಿವೆ. ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಛಾವಣಿಯ ಮೇಲ್ಭಾಗದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಛಾವಣಿಯ ಒಂದು ಭಾಗ ಕುಸಿದು ಬಿದ್ದಿದೆ.
ನಿಮ್ಮ ಕಾಮೆಂಟ್ ಬರೆಯಿರಿ