ಸಂವಿಧಾನ-ಕಾನೂನು ಚೌಕಟ್ಟಿನೊಳಗೆ ಮೀಸಲಾತಿ ಬೇಡಿಕೆ ಬಗ್ಗೆ ತೀರ್ಮಾನ: ಬಿಎಸ್‌ವೈ

ಬೆಂಗಳೂರು: ಸಂವಿಧಾನ ಹಾಗೂ ಕಾನೂನು ಚೌಕಟ್ಟಿನಡಿಯಲ್ಲಿ ವಿವಿಧ ಜಾತಿ, ಸಮುದಾಯಗಳ ಮೀಸಲಾತಿ ಬೇಡಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯನವರ ೧೧೩ನೇ ಜಯಂತಿ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಕೆಂಗಲ್ ಹನುಮಂತಯ್ಯನವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಜಾತಿ-ಸಮುದಾಯಗಳಿಗೆ ಸಂವಿಧಾನದ ಪ್ರಕಾರವೇ ಮೀಸಲಾತಿ ಕಲ್ಪಿಸಬೇಕಾಗುತ್ತದೆ. ಹಾಗಾಗಿ ಕಾನೂನಿನ ಚೌಕಟ್ಟಿನಲ್ಲಿ ಯಾವ ಜಾತಿ ಸಮುದಾಯಗಳಿಗೆ ಯಾವ ರೀತಿ ಮೀಸಲಾತಿ ನೀಡಲು ಸಾಧ್ಯ ಎಂಬುದನ್ನು ಕಾನೂನು ಹಾಗೂ ಸಂವಿಧಾನ ತಜ್ಞರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ದೇಶದ ವಿವಿಧ ರಾಜ್ಯಗಳು ಯಾವ ರೀತಿ ಜಾತಿ ಸಮುದಾಯಗಳಿಗೆ ಮೀಸಲಾತಿ ನೀಡಿದ್ದಾರೆಯೋ ಅದೇ ರೀತಿ ಕರ್ನಾಟಕದಲ್ಲೂ ಮೀಸಲಾತಿ ಸೌಲಭ್ಯ ಒದಗಿಸಲು ಸಾಧ್ಯ. ಎಲ್ಲವನ್ನೂ ಸಂವಿಧಾನದ ಚೌಕಟ್ಟಿನಲ್ಲೇ ನಿರ್ಧರಿಸಬೇಕಾಗುತ್ತದೆ. ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲಾತಿ ಬೇಡಿಕೆ ಇಟ್ಟಿವೆ. ಎಲ್ಲವನ್ನೂ ಅಧ್ಯಯನ ಮಾಡಿ ಏನೆಲ್ಲಾ ಮಾಡಲು ಸಾಧ್ಯವೋ ಅದನ್ನು ಮಾಡಲಾಗವುದು ಎಂದರು.
ಮಾರ್ಚ್‌ನಲ್ಲಿ ಬಜೆಟ್:
ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲು ತೀರ್ಮಾನಿಸಿದ್ದೇನೆ. ದಿನಾಂಕ ಇನ್ನೂ ನಿಗದಿ ಮಾಡಿಲ್ಲ. ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸುತ್ತಿದ್ದೇನೆ. ಇಂದೂ ಸಹ ವಿವಿಧ ಇಲಾಖೆಗಳ ಜತೆ ಬಜೆಟ್ ಸಭೆ ನಡೆಸಲಾಗಿದೆ. ಎಲ್ಲರ ಜತೆ ಚರ್ಚಿಸಿ ದಿನಾಂಕ ನಿಗದಿ ಮಾಡುತ್ತೇನೆ ಎಂದರು.

ಪ್ರಮುಖ ಸುದ್ದಿ :-   ಬೀಳಗಿ : ಮೊಸಳೆ ದಾಳಿಯಿಂದ ಮಾಲೀಕನ ಪ್ರಾಣ ಉಳಿಸಿದ ಎತ್ತು...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement