ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ನಡೆಸುವ ಎಫ್‍ಡಿಎ ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಆರೋಪಿ ರಾಚಪ್ಪನ ಚಿಕ್ಕಪ್ಪನ ಮಗ.
ಆರೋಪಿ ವೆಂಕಟೇಶ್ ಸಹ ಎಫ್‍ಡಿಎ ಪರೀಕ್ಷೆ ತೆಗೆದುಕೊಂಡಿದ್ದ. ಈತನ ಬಂಧನದಿಂದಾಗಿ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 24ಕ್ಕೆ ಏರಿದೆ. ಈ ಪ್ರಕರಣದಲ್ಲಿ ಇನ್ನೂ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಸಿಸಿಬಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಬಂಧಿತನಾಗಿರುವ ಆರೋಪಿ ವೆಂಕಟೇಶ್‍ನನ್ನು ವಿಚಾರಣೆಗೊಳಪಡಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ