ದೆಹಲಿ: ದೆಹಲಿಯಲ್ಲಿ ಜನವರಿ ೨೬ರಂದು ನಡೆದ ಹಿಂಸಾಚಾರ ಘಟನೆಗಾಗಿ ಬಂಧಿತ ಆರೋಪಿಗಳು ಪೊಲೀಸ್ ಠಾಣೆಗೆ ಅಲೆದಾಡುವುದನ್ನು ತಪ್ಪಿಸಲು ಅಂದಿನ ಎಲ್ಲ ಎಫ್‌ಐಆರ್‌ಗಳನ್ನು ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡುವಂತೆ ದೆಹಲಿ ನ್ಯಾಯಾಲಯ ಆದೇಶಿಸಿದೆ.
ಬಂದಿತರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ನಂಗ್ಲೊಯಿ ಪೊಲೀಸ್ ಠಾಣೆ ಜನವರಿ ೨೬ರ ಹಿಂಸಾಚಾರದ ಕುರಿತ ಆರೋಪಿಗಳ ಎಫ್‌ಐಆರ್ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಬೇಕು. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅಭಿನವ್ ಪಾಂಡೆ ಆದೇಶ ನೀಡಿದ್ದಾರೆ.
ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದರೂ ಪೊಲೀಸರು ಎಫ್‌ಐಆರ್ ನಕಲನ್ನು ಒದಗಿಸಿಲ್ಲ ಎಂದು ದೀಪಕ್ ಎಂಬ ಆರೋಪಿ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.
ರೈತರ ಆಂದೋಲನದ ಸಂದರ್ಭದಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದ ಎಲ್ಲಾ ಎಫ್‌ಐಆರ್‌ಗಳನ್ನು ನಂಗ್ಲೋಯ್ ಪೊಲೀಸ್ ಠಾಣೆಯಲ್ಲಿ ನೋಂದಾಯಿಸಲಾಗಿದೆ. ಆರೋಪಿಗಳ ಹಾಗೂ ಅವರ ಕುಟುಂಬದ ಸದಸ್ಯರು ಅಲೆದಾಡುವುದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ