ಬೆಂಗಳೂರು: ರಾಜ್ಯದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.
ಮೊದಲ ಹಂತದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿನ ಸಿಬ್ಬಂದಿಗೆ ಲಸಿಕೆ ಹಾಕಲಾಗಿದ್ದು, ಈವರೆಗೆ ೨,೮೯,೭೮೭ ಮಹಿಳೆಯರು ಲಸಿಕೆ ಪಡೆದರೆ ೧,೭೪,೫೪೫ ಪುರುಷರು ಲಸಿಕೆ ಹಾಕಿಸಿಕೊಂಡಿದ್ದಾರೆ.
ಆಶಾ ಕಾರ್ಯಕರ್ತೆಯರು, ಎಎನ್‌ಎಂ ಶುಶ್ರೂಷಕಿಯರ ಸಂಖ್ಯೆ ಹೆಚ್ಚಾಗಿದ್ದರಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಂಡಿದ್ದಾರೆ. ಪುರುಷರು ಲಸಿಕೆ ಪಡೆದುಕೊಳ್ಳಲು ಆಸಕ್ತಿ ತೋರುತ್ತಿಲ್ಲ ಎಂದು ಹೇಳುವುದು ಸರಿಯಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊವಿಡ್‌ನಿಂದ ಈವರೆಗೆ ೮೭೫೭ ಪುರುಷರು ಮೃತಪಟ್ಟಿದ್ದರೆ, ೩೪೮೪ ಮಹಿಳೆಯರು ಜೀವ ಕಳೆದುಕೊಂಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ