ಕೊರೋನಾ: ೪೩೦ ಜನರಿಗೆ ಸೋಂಕು, ೭ ಸಾವು

ಬೆಂಗಳೂರು: ರಾಜ್ಯದಲ್ಲಿ ಕಳೆದ ೨೪ ತಾಸಿನಲ್ಲಿ 430 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಏಳು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,251ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
340 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ 228 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,01,323ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಆರು ಜನ ಮೃತಪಟ್ಟಿದ್ದಾರೆ . 137 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಡಿಕೆ ಶಿವಕುಮಾರ ವಿರುದ್ಧ ಸಿಬಿಐ ತನಿಖೆ ಅನುಮತಿ ಹಿಂಪಡೆದ ಪ್ರಕರಣ : ವಿಚಾರಣೆ 4 ವಾರ ಮುಂದೂಡಿದ ಸುಪ್ರೀಂ ಕೋರ್ಟ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement