ಧಾರವಾಡ ಬೈಪಾಸ್ ಅಗಲೀಕರಣಕ್ಕೆ ಟೆಂಡರ್ ಕರೆಯಲು ಗಡ್ಕರಿ ಸೂಚನೆ

ಹುಬ್ಬಳ್ಳಿ : ಧಾರವಾಡ ಬೈಪಾಸ್ ಅಗಲೀಕರಣಕ್ಕೆ ಟೆಂಡರ್ ಕರೆಯಲು ಕೇಂದ್ರ ಸಾರಿಗೆ ಸಚಿವ ಗಡ್ಕರಿ ಸೂಚನೆ ನೀಡಿದ್ದಾರೆ.
ಗುರುವಾರ ವದೆಹಲಿಯ ಹೆದ್ದಾರಿ ಮಂತ್ರ್ರಾಲಯದಲ್ಲಿ ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ೩೦ ಕಿಮೀ ರಸ್ತೆಯನ್ನು ಷಟ್ಪಥ ರಸ್ತೆಯನ್ನಾಗಿ ಮಾರ್ಪಡಿಸಲು ಈ ಕೂಡಲೇ ಟೆಂಡರ್ ಕರೆಯುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಹಿಂದೆಯೇ ಈ ರಸ್ತೆಯನ್ನು ನಿರ್ಮಾಣ ಮಾಡಿ ನಿರ್ವಹಣೆ ಮಾಡುತ್ತಿರುವ ನಂದಿ ಹೈವೇ ಡೆವಲಪರ್ಸ್‌ ಸಹಯೋಗದೊಂದಿಗೆ ಆರು ಪಥ ಮುಖ್ಯ ರಸ್ತೆ ಹಾಗೂ ಸಮರ್ಪಕವಾಗಿ ಸರ್ವಿಸ್ ರಸ್ತೆಯನ್ನು ಎರಡೂ ಕಡೆ ನಿರ್ಮಿಸಲು ಸೂಚನೆ ನೀಡಲಾಗಿದೆ. ಈಗಾಗಲೇ ಡಿಪಿಆರ್. ತಯಾರಿಸಲಾಗಿದ್ದು ಸಾರ್ವಜನಿಕರ ಅವಶ್ಯಕತೆಗೆ ಅನುಕೂಲವಾಗಿ ಆರ್.ಓ.ಬಿ. ಮತ್ತು ಆರ್.ಯು.ಬಿ. ಸೇರಿಸಲು ಕೂಡಾ ಸೂಚನೆ ನೀಡಿದ್ದು, ಮುಖ್ಯವಾಗಿ ೩೩ ಹೆಕ್ಟೇರ್ ಭೂ ಸ್ವಾಧೀನ ಅವಶ್ಯವಾಗಿದೆ. ಭೂಮಿ ವಶಪಡಿಸಿಕೊಂಡು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚಿಸಿದರು. ಕಾಮಗಾರಿ ಪ್ರಾರಂಭದ ನಂತರ ಯಾವುದೇ ಅಡೆತಡೆಗಳು ಬಾರದ ರೀತಿಯಲ್ಲಿ ಸಂಬಂಧಪಟ್ಟ ಎಲ್ಲ ಕಡೆಗಳಿಂದ ಒಡಂಬಡಿಕೆ ಮಾಡಿಕೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ನಂದಿ ಡೆವಲಪರ್ಸ್‌ ಅಧಿಕಾರಿಗಲೂ ಸಹ ಭಾಗವಹಿಸಿ ರಸ್ತೆ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.
ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಸಂಸದರಾದ ಶಿವಕುಮಾರ ಉದಾಸಿ, ಜಿ. ಎಂ.ಸಿದ್ದೇಶ್ವರ, ಗದ್ದೀಗೌಡರ್,ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್‌ಕುಮಾರ ಕಟಿಲ್, ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದ ಕಾರ್ಯದರ್ಶಿಗಳು, ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮೊದಲಾದವರಿದ್ದರು.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/
ಓದಿರಿ :-   ನೂಪುರ್ ಶರ್ಮಾ ಬೆಂಬಲಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್‌ ಮಾಡಿದ್ದಕ್ಕೆ ಅಂಗಡಿಯವನ ಶಿರಚ್ಛೇದ ಮಾಡಿದ ಇಬ್ಬರ ಬಂಧನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ