ಯುಜಿಸಿ ಹಿಂಬಾಕಿ ಪಾವತಿ ಬೇಡಿಕೆ ಶೀಘ್ರವೇ ಈಡೇರಿಕೆ

ಬೆಂಗಳೂರು:ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿದಮತೆ ಸರ್ಕಾರಿ ಕಾಲೇಜು ಪ್ರಾಧ್ಯಾಪಕರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.
ಪ್ರಾಧ್ಯಾಪಕರ ರಾಷ್ಟ್ರೀಯ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರದ ಪಾಲು ತುಂಬಿಲ್ಲ. ತಕ್ಷಣ ತುಂಬಲಾಗುವುದು. 2006ರ ಯುಜಿಸಿ ವೇತನ ಹಿಂಬಾಕಿ ಮತ್ತು 2019ರ ಏಪ್ರಿಲ್ ತಿಂಗಳಿನಿಂದ ಪಾವತಿಯಾಗಬೇಕಿರುವ ವೇತನ ಕುರಿತು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಲಾಗುವುದು ಎಂದರು
ಕರ್ನಾಟಕ ಸರಕಾರಿ ಕಾಲೇಜುಗಳ ಬೋಧಕರ ಸಂಘದ ಅಧ್ಯಕ್ಷ ಡಾ.ಡಿ.ಎಂ.ಮಂಜುನಾಥ್‌ ಮತ್ತಿತರೆ ಪದಾಧಿಕಾರಿಗಳ ಜತೆ ಮಾತುಕತೆ ನಡೆಸಿದ ಅವರು, ಈ ಬಗ್ಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
2021ರ ವರ್ಗಾವಣೆ ಕಾಯ್ದೆಯ ಪ್ರಕಾರ ವರ್ಗಾವಣೆ ನೀತಿ ರೂಪಿಸಲಾಗಿದೆ. ಈ ವರ್ಷದ ವರ್ಗಾವಣೆ ಪ್ರಕ್ರಿಯೆ ಬೇಗ ಆರಂಭಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಪ್ರಾಂಶುಪಾಲರ ಹುದ್ದೆ ಭರ್ತಿಗೆ ಕೂಡಲೇ ಪ್ರಕ್ರಿಯೆ ಆರಂಭಿಸುವುದು, ಗರಿಷ್ಠ ವಯೋಮಿತಿಗೆ ವಿನಾಯಿತಿ ನೀಡಿ ಯುಜಿಸಿ ವೇತನ ಶ್ರೇಣಿಯಲ್ಲಿನ ಸಹ ಪ್ರಾಧ್ಯಾಪಕರ ನೇಮಕ ಮಾಡಿಕೊಳ್ಳುವುದು, ಪ್ರಾಧ್ಯಾಪಕ ಹುದ್ದೆಯ ಪದೋನ್ನತಿಗೆ ಕೂಡಲೇ ಚಾಲನೆ ನೀಡುವ ಬಗ್ಗೆಯೂ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು ಎಂದರು.

ಪ್ರಮುಖ ಸುದ್ದಿ :-   ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವು ವಿಸ್ತರಣೆ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಪಿಹೆಚ್ʼಡಿ ವೇತನ ಬಡ್ತಿ ತಾರತಮ್ಯ ಬಗೆಹರಿಸುವ ಸಲುವಾಗಿ ಆಯುಕ್ತರೊಂದಿಗೆ ಪ್ರತ್ಯೇಕ ಸಭೆ ನಡೆಸುವಂತೆ ಸೂಚಿಸಿದ ಉಪ ಮುಖ್ಯಮಂತ್ರಿಗಳು ಪಿಎಚ್‌ ಡಿ ಮಾಡಲು ಪ್ರಾಧ್ಯಾಪಕರು ಅರ್ಜಿ ಸಲ್ಲಿಸುವ ವೇಳೆ ನಿರಪೇಕ್ಷಣಾ ಪತ್ರ ಕೇಳಬಾರದು. ಬದಲಿಗೆ ಪ್ರವೇಶ ಪಡೆದ ಮೇಲೆ ಈ ಪತ್ರ ಸಲ್ಲಿಸಿದರೆ ಸಾಕು. ಈ ಬಗ್ಗೆ ಎಲ್ಲ ವಿವಿಗಳಿಗೆ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಾಲೇಜುಗಳಲ್ಲಿ ಈವರೆಗೂ ಬೋಧಕೇತರ ಸಿಬ್ಬಂದಿಯಾಗಿದ್ದ ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಸಿಬ್ಬಂದಿಗೆ ಪ್ರಾಧ್ಯಾಪಕರ ಸ್ಥಾನಮಾನ ನೀಡುವುದು, ಸರಕಾರಿ ಸ್ವಾಮ್ಯದಲ್ಲಿರುವ 108 ಸರಕಾರಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅರ್ಹ ಪ್ರಾಧ್ಯಾಪಕರಿಗೆ ಪಿಎಚ್‌ ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಲು ಅವಕಾಶ ಕೊಡುವ ಬಗ್ಗೆ ಪರಿಶೀಲಿಸಲು ನಿರ್ಧಾರ ಕೈಗೊಳ್ಳಲಾಯಿತು. 2003ರಲ್ಲಿ ನೇಮಕಗೊಂಡ ಅರೆಕಾಲಿಕ ಉಪನ್ಯಾಸಕರಿಗೆ ಮಾನವೀಯತೆಯ ಆಧಾರದ ಮೇಲೆ ಸ್ಥಾನೀಕರಣ ನೀಡಲು ಪರಿಶೀಲಿಸಲು ಒಪ್ಪಿಗೆ ಹಾಗೂ ಬಾಕಿ ಇರುವ ಸ್ಥಾನೀಕರಣ ಪ್ರಸ್ತಾವನೆಗಳನ್ನು ಕೆಲವೇ ದಿನಗಳಲ್ಲಿ ಮಂಜೂರು ಮಾಡಲಾಗುವುದು. 310 ಪ್ರಾಂಶುಪಾಲರನ್ನು ಆದಷ್ಟು ಬೇಗ ನೇಮಕ ಮಾಡಲಾಗುವುದು ಎಂದು ತಿಳಿಸಿದರು..
ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್‌, ಮುಖ್ಯ ಆಡಳಿತಾಧಿಕಾರಿ ಬಾಲಚಂದ್ರ ಮೊದಲಾದವರಿದ್ದರು.

ಪ್ರಮುಖ ಸುದ್ದಿ :-   ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪ್ರವೇಶ ಪತ್ರ ಪ್ರಕಟ: ಜೂನ್‌ 30 ರಂದು ಪರೀಕ್ಷೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement