ಸಾಲ ವಿತರಣೆ ವಿಳಂಬ: ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ಸಿಎಂ ಗರಂ

posted in: ರಾಜ್ಯ | 0

ಬೆಂಗಳೂರು:  ಪ್ರಧಾನಮಂತ್ರಿಗಳ ಸ್ವನಿಧಿ ಯೋಜನೆಯಡಿ ಸಾರ್ವಜನಿಕರಿಗೆ ಸರಿಯಾಗಿ ಸಾಲ ಸೌಲಭ್ಯ ನೀಡದೆ ಸತಾಯಿಸುವ ಬ್ಯಾಂಕ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಚಳಿ ಬಿಡಿಸಿದರು.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ವಿಧಾನಸೌಧದಲ್ಲಿ ಸ್ವನಿಧಿ ಮತ್ತು ಪ್ರಧಾನ ಮಂತ್ರಿಗಳ ಆವಾಸ್ ಯೋಜನೆ, ಬೆಂಗಳೂರು ವಸತಿ ಯೋಜನೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಸಾರ್ವಜನಿಕರಿಗೆ ಸಾಲ ವಿತರಣೆ ಮಾಡಲು ವಿಳಂಬ ಧೋರಣೆ ಅನುಸರಿಸುತ್ತಿರುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಗರಂ ಆದರು.

ಕೆಲವು ಬ್ಯಾಂಕ್ ಅಧಿಕಾರಿಗಳು ಸಾರ್ವಜನಿಕರಿಗೆ ಸಾಲ ಸೌಲಭ್ಯ ನೀಡಲು ದಾಖಲಾತಿಗಳನ್ನು ಕೇಳುತ್ತಿರುವುದು ಗಮನಕ್ಕೆ ಬಂದಿದೆ. ಎಲ್ಲಾ ದಾಖಲೆಗಳು ಸರಿಯಾಗಿದ್ದರೂ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪವಿದೆ  ಈ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ವೈಯಕ್ತಿಕವಾಗಿ ನಮಗೆ ಸಾವಿರಾರು ದೂರುಗಳು ಬಂದಿವೆ. ತಾಂತ್ರಿಕ ಕಾರಣ ನೀಡಿ ವಿಳಂಬ ಮಾಡಲಾಗುತ್ತಿದೆ. ಸಾಲ ವಿತರಣೆ ಮಾಡುವುದರಲ್ಲೂ ಕರ್ನಾಟಕ 5ನೆ ಸ್ಥಾನದಲ್ಲಿದೆ. ಇದರಿಂದ ದೇಶಕ್ಕೆ ಯಾವ ಸಂದೇಶ ಹೋಗುತ್ತದೆ ಎಂದು ತರಾಟೆಗೆ ತೆಗೆದುಕೊಂಡರು.ನೀವು ಸರಿಯಾಗಿ ಸಾಲ ನೀಡೇ ಇಲ್ಲ ಎಂಬುದು ಅಂಕಿ ಅಂಶಗಳಿಂದಲೇ ತಿಳಿಯುತ್ತದೆ. ಫಲಾನುಭವಿಗಳಿಗೆ ಸಮರ್ಪಕವಾಗಿ ಸಾಲ ಸಿಗಬೇಕೆಂಬುದು ಪ್ರಧಾನಮಂತ್ರಿಯವರ ಉದ್ದೇಶವಾಗಿದೆ. ನನಗೆ ಇಲ್ಲ ಸಲ್ಲದ ಕಾರಣಗಳನ್ನು ಹೇಳಬೇಡಿ. ಈ ತಿಂಗಳ ಅಂತ್ಯಕ್ಕೆ ಎಲ್ಲವೂ ಸರಿ ಹೋಗಬೇಕು. ಕೆಲವೇ ದಿನಗಳಲ್ಲಿ ಕರ್ನಾಟಕ ಸಾಲ ವಿತರಿಸುವ ರಾಜ್ಯಗಳಲ್ಲಿ ಮೊದಲ ಸ್ಥಾನಕ್ಕೆ ಬರಬೇಕು. ಅದಕ್ಕೆ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕೋ ಅದೆಲ್ಲವನ್ನೂ ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಓದಿರಿ :-   ಕೊರೊನಾ ಏರಿಕೆ ಬೆನ್ನಲ್ಲೇ ಹೊಸ ಮಾರ್ಗಸೂಚಿ ಜಾರಿಗೆ

ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್ ಮಂಡನೆ ಸಂಬಂಧ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದರು.

ರೇಸ್‍ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ   ಜಲಸಂಪನ್ಮೂಲ , ವೈದ್ಯಕೀಯ, ಆರೋಗ್ಯ, ಗಣಿ, ಕೃಷಿ, ತೋಟಗಾರಿಕೆ, ನಗರಾಭಿವೃದ್ಧಿ, ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಸಂಬಂಧಪಟ್ಟ ಸಚಿವರು, ಅಧಿಕಾರಿಗಳ ಜತೆ ಯಡಿಯೂರಪ್ಪ ಸಭೆಯನ್ನು ನಡೆಸಿದರು. ಬಜೆಟ್‍ನಲ್ಲಿ ರೂಪಿಸಬೇಕಾದ ಯೋಜನೆಗಳು, ಕಳೆದ ಬಜೆಟ್‍ನಲ್ಲಿ ಅನುಷ್ಠಾನಗೊಂಡಿರುವ ಕಾರ್ಯಕ್ರಮಗಳು ಶೇಕಡಾವಾರು ಪ್ರಗತಿ ಬಗ್ಗೆ ಮಾಹಿತಿ ಪಡೆದರು.

ಪ್ರಧಾನಮಂತ್ರಿ ಸ್ವನಿಧಿ ಯೋಜನೆಯು ಜುಲೈ 2020ರಿಂದ ಜಾರಿಗೆ ಬಂದಿದ್ದು, ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದಿಂದ ಅನುದಾನ ಬಿಡುಗಡೆಯಾಗಲಿದೆ. ಪಿಎಂ ಸ್ವನಿಧಿ ಯೋಜನೆಯಡಿ ಬೀದಿ ವ್ಯಾಪಾರಿಗಳಿಗೆ 10 ಸಾವಿರ ರೂ.ಗಳ ದುಡಿಯುವ ಬಂಡವಾಳ ಸೌಲಭ್ಯದೊಂದಿಗೆ ನಿಯಮಿತ ಪಾವತಿಗೆ ಶೇಕಡಾ 7ರ ಬಡ್ಡಿ ದರದಂತಹ ಪ್ರೋತ್ಸಾಹಕಗಳನ್ನು ಹಾಗೂ ಡಿಜಿಟಲ್ ವಹಿವಾಟಿಗೆ ಪುರಸ್ಕಾರವನ್ನೂ ನೀಡಲಾಗುವುದು.

ಈವರೆಗೆ 2,24,368 ಅರ್ಜಿಗಳನ್ನು ಯೋಜನೆಯಡಿ ಸ್ವೀಕರಿಸಲಾಗಿದ್ದು, ಕೇವಲ 66,423 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. ರಾಜ್ಯದ ಬ್ಯಾಂಕುಗಳು ಶೇ 30 ರಷ್ಟು ಅರ್ಜಿಗಳನ್ನು ಮಾತ್ರ ವಿಲೇವಾರಿ ಮಾಡಿವೆ. ಕೋವಿಡï-19 ಸಾಂಕ್ರಾಮಿಕದಿಂದ ತತ್ತರಿಸಿರುವ ಬಡಜನರಿಗೆ ಈ ಯೋಜನೆ ಪ್ರಯೋಜನಕಾರಿಯಾಗಲಿದ್ದು, ಬಾಕಿ ಇರುವ ಎಲ್ಲ ಅರ್ಜಿಗಳನ್ನು ಬ್ಯಾಂಕುಗಳು ಅತಿ ಶೀಘ್ರವಾಗಿ ಮಂಜೂರಾತಿ ನೀಡಿ ವಿಲೇವಾರಿ ಮಾಡಬೇಕೆಂದು ಸೂಚಿಸಿದರು.

ಓದಿರಿ :-   ಐಎಫ್‌ಎಸ್‌ ಪರೀಕ್ಷೆಯಲ್ಲಿ ಉತ್ತರ ಕನ್ನಡ ಯುವಕರ ಉತ್ತಮ ಸಾಧನೆ: ದೇಶಕ್ಕೆ 2ನೇ ರ‍್ಯಾಂಕ್ ಪಡೆದ ವರದರಾಜ ಗಾಂವಕರ, ನವೀನಕುಮಾರ ಹೆಗಡೆಗೆ 62ನೇ ರ‍್ಯಾಂಕ್

ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ, ವಸತಿ ಸಚಿವ ವಿ.ಸೋಮಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಕೆನರಾ ಬ್ಯಾಂಕ್‍ನ ಕಾರ್ಯ ನಿರ್ವಾಹಕ ನಿರ್ದೇಶಕರಾದ ಎ.ಮಣಿಮೇಖಲೈ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ನಿರ್ದೇಶಕರಾದ ಜೋಸ್ ಜೆ ಕಟ್ಟೂರ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಬ್ಯಾಂಕುಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ