ಪಿಎಂ ಆವಾಸ್ ಯೋಜನೆ: 15 ದಿನದಲ್ಲಿ ಲೀಡ್ ಬ್ಯಾಂಕ್ ಅರ್ಜಿ ಸಲ್ಲಿಕೆಗೆ ಸೂಚನೆ

ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸಲ್ಲಿಕೆಯಾದ ಅರ್ಜಿಗಳನ್ನು 15 ದಿನದೊಳಗಾಗಿ ಆಯಾ ಜಿಲ್ಲೆಗಳ ಲೀಡ್ ಬ್ಯಾಂಕ್ ಗಳಿಗೆ ಸಲ್ಲಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.
ಆಯಾ ಜಿಲ್ಲಾ ಲೀಡ್ ವ್ಯವಸ್ಥಾಪಕರು ಅರ್ಜಿಗಳನ್ನು ವಿವಿಧ ಬ್ಯಾಂಕ್ ಗಳಿಗೆ ಕಳುಹಿಸಿ, ತ್ವರಿತವಾಗಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.
ಗುರುವಾರ ಪ್ರಧಾನ ಮಂತ್ರಿ ಆವಾಸ್ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳ ಪ್ರಗತಿ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನಲ್ಲಿ ವಿವಿಧ ಬ್ಯಾಂಕ್ ಗಳ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಿದ ನಂತರ ಈ ಸೂಚನೆ ನೀಡಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ತ್ವರಿತವಾಗಿ ಸಾಲ ವಿತರಿಸುವಂತೆ ಬ್ಯಾಂಕರ್ ಗಳಿಗೆ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ಸ್ವನಿಧಿ ಯೋಜನೆ 2020ರ ಜುಲೈನಿಂದ ಜಾರಿಗೆ ಬಂದಿದ್ದು, ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ಅನುದಾನ ನೀಡುತ್ತಿದೆ.ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ಸಾಲ ನೀಡುವ ಯೋಜನೆಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲವಾಗುವ ವೇಳಾಪಟ್ಟಿ ಪ್ರಕಟಿಸಿ, ಸಾಲ ನೀಡಬೇಕು. 10 ಸಾವಿರ ಪಾವತಿ: ಪಿಎಂ ಸ್ವನಿಧಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ 10 ಸಾವಿರ ರೂ. ದುಡಿಯುವ ಬಂಡವಾಳ ಸೌಲಭ್ಯದೊಂದಿಗೆ ನಿಯಮಿತ ಪಾವತಿಗೆ ಶೇ. 7ರ ಬಡ್ಡಿದರದ ಪ್ರೋತ್ಸಾಹ ಹಾಗೂ ಡಿಜಿಟಲ್ ವಹಿವಾಟಿಗೆ ಪುರಸ್ಕಾರ ನೀಡಲು ಸಹ ಸೂಚಿಸಿದ್ದಾರೆ.
ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಯೋಜನೆ ಪ್ರಗತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದರು.
ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ವಸತಿ ಸಚಿವ ವಿ. ಸೋಮಣ್ಣ, ಮುಖ್ಯಕಾರ್ಯದರ್ಶಿ ರವಿಕುಮಾರ್ ಮೊದಲಅದವರಿದ್ದರು.

ಪ್ರಮುಖ ಸುದ್ದಿ :-   ಟೆರೇಸ್‌ ಮೇಲೆ ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದ ಉಡುಪಿಯ ರೈತ...ಇದರ ಬೆಲೆ ಕೆ.ಜಿ.ಗೆ ₹3 ಲಕ್ಷ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement