ಕ್ರೈಸ್ತ, ಇಸ್ಲಾಮಿಗೆ ಮತಾಂತರವಾದ ದಲಿತರಿಗೆ ಮೀಸಲು ಸೌಲಭ್ಯವಿಲ್ಲ

ನವದೆಹಲಿ: ಕ್ರೈಸ್ತ, ಇಸ್ಲಾಮ್ ಧರ್ಮಗಳಿಗೆ ಮತಾಂತರವಾಗುವ ದಲಿತರು ಮೀಸಲು ಕ್ಷೇತ್ರಗಳಲ್ಲಿ ವಿಧಾನಸಭೆ, ಲೋಕಸಭೆ ಚುನಾವಣೆಗಳಿಗೆ ಸ್ಪರ್ಧಿಸುವಂತಿಲ್ಲ ಹಾಗೂ ಅಂತಹ ದಲಿತರಿಗೆ ಮೀಸಲಾತಿಯಡಿಯಲ್ಲಿ ಯಾವ ಸೌಲಭ್ಯವೂ ಸಿಗುವುದಿಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಶುಕ್ರವಾರ ರಾಜ್ಯಸಭೆಯಲ್ಲಿ ಬಿಜೆಪಿ ಸಂಸದ ಜಿವಿಎಲ್ ನರಸಿಂಹ ರಾವ್ ಪ್ರಶ್ನೆಗೆ ಉತ್ತರಿಸಿದ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಹಿಂದೂ, ಸಿಖ್, ಬೌದ್ಧ ಮತಗಳನ್ನು ಅನುಸರಿಸುವ ದಲಿತರನ್ನು ಹೊರತುಪಡಿಸಿ, ಕ್ರೈಸ್ತ, ಮುಸಲ್ಮಾನರಾಗಿ ಮತಾಂತರ ಹೊಂದುವ ದಲಿತರಿಗೆ ಮೀಸಲಾತಿಯ ಯಾವ ಸೌಲಭ್ಯವೂ ಸಿಗುವುದಿಲ್ಲ ಎಂದು ಹೇಳಿದ್ದಾರೆ.
ದಲಿತರು ಹಿಂದೂ, ಸಿಖ್, ಬೌದ್ಧ ಧರ್ಮಗಳನ್ನು ಅನುಸರಿಸಿದರೆ ಅವರನ್ನು ಪರಿಶಿಷ್ಟ ಜಾತಿಯ ಸದಸ್ಯರೆಂದೇ ಗುರುತಿಸಲಾಗುತ್ತದೆ ಎಂದು ಉತ್ತರಿಸಿದ್ದಾರೆ.
ಈ ಕಾನೂನನ್ನು ಬದಲಾವಣೆ ಮಾಡುವ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ದೇಶದಲ್ಲಿದ್ದ 'ಗ್ರಹಿಕೆ ರಾಜಕಾರಣ'ವನ್ನು ʼಕಾರ್ಯನಿರ್ವಹಣೆ ರಾಜಕಾರಣʼವನ್ನಾಗಿ ಬದಲಾಯಿಸಿದ್ದು ಬಿಜೆಪಿ ಸರ್ಕಾರ: ಪ್ರಧಾನಿ ಮೋದಿ ಪ್ರತಿಪಾದನೆ

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement