ಚಂದಾ ಕೊಚ್ಚರ್‌ಗೆ ಜಾಮೀನು

ಮುಂಬೈ: ಐಸಿಐಸಿಐ ಬ್ಯಾಂಕ್-ವಿಡಿಯೋಕಾನ್ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್‌ ಅವರಿಗೆ ಶುಕ್ರವಾರ ಹಾನ್ಯಾಯಾಲಯ ಜಾಮೀನು ನೀಡಿದೆ.
ಇವರು ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಹಾಜರಾದರು. ಜನವರಿ 30ರಂದು ಮನಿ ಲಾಂಡರಿಂಗ್ ತಡೆಗಟ್ಟುವಿಕೆ ಕಾಯ್ದೆ (ಪಿಎಂಎಲ್‌ಎ) ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಯಾದ ನಂತರ ನ್ಯಾಯಾಲಯವು ಚಂದಾ ಕೊಚ್ಚರ್, ಅವರ ಪತಿ ದೀಪಕ್, ವಿಡಿಯೋಕಾನ್ ಗ್ರೂಪ್ ಪ್ರವರ್ತಕ ವೇಣುಗೋಪಾಲ್ ಧೂತ್ ಮತ್ತು ಇತರ ಆರೋಪಿಗಳಿಗೆ ಹಾಜರಾಗುವಂತೆ ಸಮನ್ಸ್‌ ನೀಡಿತ್ತು.
ಚಂದಾ ಕೊಚ್ಚರ್ ವಿಶೇಷ ನ್ಯಾಯಾಧೀಶ ಎ ಎ ನಂದಗಾಂವ್ಕರ್ ಅವರ ಮುಂದೆ ಹಾಜರಾದರು. ಆಕೆಯ ವಕೀಲರಾದ ವಿಜಯ್ ಅಗರ್ವಾಲ್ ಮತ್ತು ರಾಹುಲ್ ಅಗರ್ವಾಲ್ ಜಾಮೀನು ಕೋರಿ, ಅವರು ಜಾರಿ ನಿರ್ದೇಶನಾಲಯದ ತನಿಖೆಗೆ ಸಹಕರಿಸುತ್ತಿದ್ದಾರೆ ಮತ್ತು ಅವರನ್ನು ಕರೆದಾಗಲೆಲ್ಲಾ ದೆಹಲಿಯ ಇಡಿ ಕಚೇರಿಗೆ ಭೇಟಿ ನೀಡಿದ್ದರು ಎಂದು ವಾದಿಸಿದರು. ಈ ಪ್ರಕರಣದಲ್ಲಿ ಕೇಂದ್ರ ಸಂಸ್ಥೆ ಅವಳನ್ನು ಎಂದಿಗೂ ಬಂಧಿಸಿಲ್ಲ ಎಂದು ಅವರು ಗಮನಸೆಳೆದರು.
ಜಾಮೀನಿಗೆ ತನ್ನ ಪಾಸ್‌ಪೋರ್ಟ್‌ನ್ನು ಕೂಡಲೇ ಇಡಿಗೆ ಒಪ್ಪಿಸುವಂತೆ ನ್ಯಾಯಾಲಯ ಹೇಳಿದೆ. ಹಾಗೂ ಸಾಕ್ಷ್ಯ ಹಾಳುಮಾಡಬಾರದು ಅಥವಾ ದೂರುದಾರ, ಸಾಕ್ಷಿಗಳು ಅಥವಾ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ವ್ಯಕ್ತಿಯ ಮೇಲೆ ಪ್ರಭಾವ ಬೀರಲು ಅಥವಾ ಸಂಪರ್ಕಿಸಲು ಪ್ರಯತ್ನಿಸಬಾರದು” ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸದ್ಯ ನ್ಯಾಯಾಂಗ ಬಂಧನದಲ್ಲಿದ್ದ ದೀಪಕ್ ಕೊಚ್ಚರ್ ಅವರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   ದೆಹಲಿ ಶ್ರದ್ಧಾ ವಾಕರ್‌ ಕೊಲೆ ಪ್ರಕರಣ : ಗ್ರೈಂಡರ್‌ನಲ್ಲಿ ಮೂಳೆಗಳನ್ನು ಸಣ್ಣಗೆ ಪುಡಿ ಮಾಡಿ ಎಸೆದಿದ್ದ-ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement