ತಮಿಳುನಾಡಿನಲ್ಲಿ ಪಟಾಕಿ ಘಟಕ ಸ್ಫೋಟ:೧೩ ಸಾವು, ೨೨ ಜನರಿಗೆ ಗಾಯ

ಚೆನ್ನೈ: ತಮಿಳುನಾಡಿನಲ್ಲಿ ಪಟಾಕಿ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ 13 ಮಂದಿ ಮೃತಪಟ್ಟಿದ್ದು, 22 ಮಂದಿಗೆ ಗಾಯಗಳಾಗಿವೆ.
ಶುಕ್ರವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ.
ವೆಂಬಕೊಟ್ಟೈ ನ ಕೊಟ್ಟೈಪಾಟಿಯಲ್ಲಿರುವ ಅಚಂಕುಲಂ ಈ ಅವಘಡ ನಡೆದಿದ್ದು, ಮೃತಪಟ್ಟವರ 11 ಮಂದಿಯ ಪೈಕಿ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಾಯಗೊಂಡ ಇಬ್ಬರನ್ನು ಸಟ್ಟೂರ್‌ ಆಸ್ಪತ್ರೆಗೆ ಸೇರಿಸಲಾಯಿತಾದರೂ ಗಂಭೀರ ಗಾಯಗಳಾಗಿದ್ದ ಾವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತದೇಹಗಳು ಸಂಪೂರ್ಣ ಸುಟ್ಟಿದ್ದು, ಗುರುತು ಪತ್ತೆ ಮಾಡಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಘಟನೆ ವರದಿಯಾದ ಬೆನ್ನಲ್ಲೇ ಮೂರು ಅಗ್ನಿಶಾಮಕ ವಾಹನಗಳೊಂದಿಗೆ, 30 ರಕ್ಷಣಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಸ್ಫೋಟದಲ್ಲಿ 10 ಕೊಠಡಿಗಳು ನಾಶವಾಗಿದೆ. ಘಟನೆ ನಡೆದಾಗ ೫೦ರಷ್ಟು ಕಾರ್ಮಿಕರು ಒಳಗಡೆ ಇದ್ದರು ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಗಣೇಶನ್ ಹೇಳಿದ್ದಾರೆ, ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಮೂಲಗಳ ಪ್ರಕಾರ ಯುನಿಟ್ಟನ್ನು ಹಲವು ಮಂದಿ ಗುತ್ತಿಗೆದಾರರಿಗೆ ಅಕ್ರಮವಾಗಿ ನೀಡಿದ್ದು, ನಿರ್ಲಕ್ಷ್ಯದಿಂದ ಸಂಭವಿಸಿರಬಹುದು ಎನ್ನಲಾಗಿದ್ದು, ನಿಖರವಾದ ಕಾರಣ ತಿಳಿದುಬರಬೇಕಿದೆ. ಸ್ಥಳೀಯ ಪೊಲೀಸ್ ಠಾಣೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಪ್ರಾರಂಭಿಸಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ರೆಪೊ ದರ 6.5% ಕ್ಕೆ ಹೆಚ್ಚಿಸಿದ ಆರ್‌ಬಿಐ : 2023-24 ಕ್ಕೆ ಜಿಡಿಪಿ ಬೆಳವಣಿಗೆ 6.4% ಎಂದು ಅಂದಾಜು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement