ಹೆಚ್ಚುತ್ತಿರುವ ಮೀಸಲಾತಿ ಪಾದಯಾತ್ರೆ ರೋಗಕ್ಕೆ ಸದ್ಯ ಔಷಧವಿಲ್ಲ: ಹೊರಟ್ಟಿ

ತುಮಕೂರು:ಮೀಸಲಾತಿ ಬಗ್ಗೆ ಮಾತನಾಡುವುದು ಬಹಳ ಕಷ್ಟದ ಕೆಲಸ. ಯಾರಿಗೆ ಏನು ಸೌಲಭ್ಯ ಕೊಡಬೇಕು ಎಂಬ ಬಗ್ಗೆ ಸರ್ಕಾರ ವಿಚಾರ ಮಾಡುತ್ತದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು..
ಶುಕ್ರವಾರ ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಹಿರಿಯ ಶ್ರೀಗಳಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಜಾತ್ಯತೀತ ರಾಷ್ಟ್ರದಲ್ಲಿದ್ದೇವೆ. ಪ್ರತಿಯೊಬ್ಬರೂ, ರಾಜಕೀಯ ಪಕ್ಷಗಳು, ರಾಜಕಾರಣಿಗಳು ಚುನಾವಣೆಗೆ ನಿಲ್ಲಬೇಕಾದರೆ ಜಾತಿ ಮುಂದಿಟ್ಟುಕೊಳ್ಳುತ್ತಾರೆ. ಇದು ಒಳ್ಳೆಯ ಪದ್ದತಿಯಲ್ಲ. ನಿಸರ್ಗ ನಿಯಮಗಳು ಬದಲಾವಣೆಯಾದಂತೆ ನಾವುಗಳು ಸಹ ಬದಲಾವಣೆಯಾಗಬೇಕಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.
೨ಎ ಮೀಸಲಾತಿಗಾಗಿ ಪಂಚಮಸಾಲಿ ಶ್ರೀಗಳು ನಡೆಸುತ್ತಿರುವ ಪಾದಯಾತ್ರೆ ಬಗ್ಗೆ ನಾನು ಮಾತನಾಡುವುದಿಲ್ಲ. ಶ್ರೀಗಳು ನಮ್ಮೆಲ್ಲರಿಗೂ ಮಾರ್ಗದರ್ಶನ ಮಾಡುವಂತಹವರು. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮೀಸಲಾತಿ ಪಾದಯಾತ್ರೆಗಳಿಗೆ ಸದ್ಯ ಔಷಧ ಇಲ್ಲ. ನಾನು ಆ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ. ನಾವೆಲ್ಲರೂ ದೇಶ, ರಾಜ್ಯದ ಬಗ್ಗೆ ಕಾಳಜಿ ಇಟ್ಟುಕೊಂಡು ಕೆಲಸ ಮಾಡುವತ್ತ ಚಿಂತನೆ ನಡೆಸಬೇಕಿದೆ ಎಂದರು..
ಕರ್ನಾಟಕ ವಿಧಾನ ಪರಿಷತ್‌ನ ಘನತೆ, ಗೌರವವನ್ನು ಎತ್ತಿ ಹಿಡಿದು ದೇಶದಲ್ಲೇ ಮಾದರಿ ವಿಧಾನ ಪರಿಷತ್ತನ್ನಾಗಿ ಮಾಡಲು ಶ್ರಮಿಸುವೆ
ಸಭಾಪತಿ ಸ್ಥಾನ ಸಂವಿಧಾನ ಬದ್ಧವಾದ ಹುದ್ದೆಯಾಗಿರುವುದರಿಂದ ಇದರಲ್ಲಿ ಯಾವುದೇ ರೀತಿಯ ಲಾಭ, ನಷ್ಟದ ವಿಚಾರ ಮಾಡುವಂತಿಲ್ಲ. ವಿಧಾನ ಪರಿಷತ್ ನಡೆಸಲು ನನಗೆ ಬಹಳ ಪ್ರೀತಿ ಮತ್ತು ಗೌರವ ಇದೆ. ಈ ವ್ಯವಸ್ಥೆಯಲ್ಲಿ ಸಮಾಜಕ್ಕೆ ದೊಡ್ಡದಾದ ಕೊಡುಗೆಯನ್ನು ಕೊಡಲು ಅವಕಾಶ ಇದೆ. ಹಾಗಾಗಿ ಆ ಕೆಲಸವನ್ನು ನಾನು ಶ್ರದ್ಧೆಯಿಂದ ಮಾಡುತ್ತೇವೆ ಎಂದರು.
ನಾನು ಅಧಿಕಾರ ಪಡೆದಾಗಲೆಲ್ಲಾ ಶ್ರೀಮಠಕ್ಕೆ ಬಂದು ಹೋಗುವ ಪರಂಪರೆ ರೂಢಿಸಿಕೊಂಡಿದ್ದೇನೆ. ೨೦೦೪, ೨೦೦೬ ಹೀಗೆ ನಾನು ಅಧಿಕಾರ ಪಡೆದಾಗಲೆಲ್ಲಾ ಶ್ರೀಕ್ಷೇತ್ರಕ್ಕೆ ಬಂದು ಹಿರಿಯ ಶ್ರೀಗಳು ಸೇರಿದಂತೆ ಎಲ್ಲರ ಆಶೀರ್ವಾದ ಪಡೆದಿದ್ದೇನೆ. ಈಗಲೂ ಆ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದೇನೆ ಈಗ
ಮಾಜಿ ಶಾಸಕ ಕೋನರೆಡ್ಡಿ, ವಸಂತ ಹೊರಟ್ಟಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ. ಆಂಜಿನಪ್ಪ ಮೊದಲಾದವರಿದ್ದರು.

ಪ್ರಮುಖ ಸುದ್ದಿ :-   ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್‌ಐಟಿಯಿಂದ ಸಮನ್ಸ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement