ಪಂಜಾಬ್ ಮಾಜಿ ಸಿಎಂ ಹತ್ಯೆ ಪ್ರಕರಣ; 6 ವಾರ  ವಿಚಾರಣೆ ಮುಂದೂಡಿಕೆ

ನವದೆಹಲಿ: ಪಂಜಾಬ್‌ ಮಾಜಿ ಸಿಎಂ ಬಿಯಾಂತ್‌ ಸಿಂಗ್‌ ಹತ್ಯೆ ಪ್ರಕರಣದಲ್ಲಿ ಬಲವಂತ್‌ ಎಸ್‌. ರಾಜೊನಾಗೆ ವಿಧಿಸಿರುವ ಗಲ್ಲು ಶಿಕ್ಷೆ ಪುನರ್‌ಪರಿಶೀಲಿಸುವುದು ರಾಷ್ಟ್ರಪತಿ ಅವರ ಪರಿಗಣನೆಯಲ್ಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.
ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಸುಪ್ರಿಂಕೋರ್ಟ್‌ಗೆ ತಿಳಿಸಿದ್ದು, ಖಾಲಿಸ್ತಾನ ವಿಷಯಕ್ಕೆ ಸಂಬಂಧಿಸಿದಂತೆ ಬಿಯಾಂತ್‌ ಸಿಂಗ್‌ ಅವರನ್ನು ಹತ್ಯೆ ಮಾಡಲಾಗಿದ್ದು, ಅ‍ಪರಾಧಿ ಬಲವಂತ್ಗೆ ಕ್ಷಮಾದಾನ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಬಗ್ಗೆ ರಾಷ್ಟ್ರಪತಿ ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ಬಲವಂತ ಪರ ವಾದ ಮಾಡಿದ ಹಿರಿಯ ವಕೀಲ ಮುಕುಲ್‌ ರೋಹಟಗಿ, 25 ವರ್ಷಗಳಿಂದ ಬಲವಂತ್‌ ಜೈಲಿನಲ್ಲಿದ್ದು, ಆತನ ಕ್ಷಮಾದಾನ ಅರ್ಜಿಯು ಕಳೆದ ಒಂಬತ್ತು ವರ್ಷಗಳಿಂದ ಬಾಕಿ ಉಳಿದಿದೆ ಎಂದು ಗಮನಕ್ಕೆ ತಂದರು. ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬ್ಡೆ ಹಾಗೂ ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್‌ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿದೆ.
ಈ ವಿಷಯದ ಬಗ್ಗೆ ಪರಿಶೀಲನೆ ನಡೆಸಲು 6 ವಾರಗಳ ಕಾಲಾವಕಾಶ ಬೇಕು ಎಂದು ತುಷಾರ್‌ ಮೆಹ್ತಾ ತಿಳಿಸಿದ್ದಾರೆ.ಮನವಿಗೆ ಸ್ಪಂದಿಸಿದ ನ್ಯಾಯಾಲಯ ಮುಂದಿನ ೬ ವಾರಗಳ ಕಾಲ ವಿಚಾರಣೆ ಮುಂದೂಡಿದೆ

ಪ್ರಮುಖ ಸುದ್ದಿ :-   ಭಾಗವತ ಕಥಾ ನಾಟಕದಲ್ಲಿ ರಾಕ್ಷಸನ ಪಾತ್ರ ಮಾಡಿದ್ದ ಬಾಲಕನ ಕತ್ತು ಸೀಳಿದ ಕಾಳಿದೇವಿ ಪಾತ್ರ ಮಾಡಿದ್ದ ಮತ್ತೊಬ್ಬ ಬಾಲಕ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement