ಫೆ.೧೪ರಿಂದ ಮೂರು ರಾಜ್ಯಗಳ ಮಹಾಪಂಚಾಯತ್‌ನಲ್ಲಿ ಟಿಕಾಯಿತ್‌ ಭಾಗಿ

ಘಾಜಿಯಾಬಾದ್: ಕೇಂದ್ರ ಸರ್ಕಾರ ಹೊಸ ಕೃಷಿ ಕಾನೂನುಗಳ ಜಾರಿ ವಿರುದ್ಧ ಮೂರು ತಿಂಗಳಿಂದ ನಡೆಯುತ್ತಿರುವ ಪ್ರತಿಭಟನೆಗೆ ಮತ್ತಷ್ಟು ಬೆಂಬಲ ಪಡೆಯಲು ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಮುಖಂಡ ರಾಕೇಶ್ ಟಿಕಾಯಿತ್‌ ಈಗ ದೇಶಾದ್ಯಂತ ಪ್ರವಾಸ ಆರಂಭಿಸಿದ್ದಾರೆ.
ಅವರು ಹರಿಯಾಣ, ಮಹಾರಾಷ್ಟ್ರ ಮತ್ತು ರಾಜಸ್ಥಾನದಲ್ಲಿ ಆಯೋಜಿಸಿರುವ ಏಳು ‘ಮಹಾಪಂಚಾಯತ್’ ಸಭೆಗಳಲ್ಲಿ ಭಾಗವಹಿಸಲಿದ್ದು.
ಸಂಯುಕ್ತ ಕಿಸಾನ್ ಮೋರ್ಚಾದ ಪ್ರತಿಭಟನೆಯ ಭಾಗವಾಗಿ ಫೆಬ್ರವರಿ 14 ರಿಂದ ಫೆಬ್ರವರಿ 23ರ ವರೆಗೆ ರೈತರ ಸಭೆಗಳು ನಡೆಯಲಿವೆ ಎಂದು ಬಿಕೆಯು ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲಿಕ್ ಹೇಳಿದ್ದಾರೆ.
“ಕಿಸಾನ್ ಮಹಾಪಂಚಾಯತ್”ಗಳು ಹರಿಯಾಣದ ಕರ್ನಾಲ್, ರೋಹ್ಟಕ್, ಸಿರ್ಸಾ ಮತ್ತು ಹಿಸಾರ್ ಜಿಲ್ಲೆಗಳಲ್ಲಿ ಹಾಗೂ ಮಹಾರಾಷ್ಟ್ರದ ಅಕೋಲಾ ಮತ್ತು ರಾಜಸ್ಥಾನದ ಸಿಕಾರ್ನಲ್ಲಿ ನಡೆಯಲಿವೆ ಎಂದು ಹೇಳಿದ್ದಾರೆ.
ಕಳೆದ ಸೆಪ್ಟೆಂಬರ್‌ನಲ್ಲಿ ಜಾರಿಗೆ ಬಂದ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕು ಮತ್ತು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಖಾತರಿಪಡಿಸುವ ಹೊಸ ಕಾನೂನನ್ನು ರೂಪಿಸಬೇಕು ಎಂದು ಒತ್ತಾಯಿಸಿ ನವೆಂಬರ್‌ನಿಂದ ದೆಹಲಿಯ ಸಿಂಘು, ಟಿಕ್ರಿ ಮತ್ತು ಗಾಜಿಪುರ ಗಡಿಗಳಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಕ್ಷಿಣ ಭಾರತದ ಜನಪ್ರಿಯ ನಟರಾದ ಅದಿತಿ ರಾವ್ ಹೈದರಿ-ಸಿದ್ಧಾರ್ಥ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement