ಮಾಜಿ ಮೇಯರ್‌ ಸಂಪತ್‌ರಾಜ್‌ಗೆ ಶರತ್ತುಬದ್ಧ ಜಾಮೀನು

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮಾಜಿ ಮೇಯರ್ ಸಂಪತ್‍ರಾಜ್ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಶರತ್ತುಬದ್ಧ ಜಾಮೀನು ನೀಡಿದೆ.
ಸಂಪತ್‍ರಾಜ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ನಾ ಶರತ್ತುಬದ್ಧ ಜಾಮೀನು ನೀಡಿದ್ದಾರೆ.

ಸಂಪತ್‍ರಾಜ್ ಪರ ವಕೀಲರಾದ ಮಹೇಶ್, ಸಿ.ವಿ.ನಾಗೇಶ್ ಈಗಾಗಲೇ ಎರಡು ಆರೋಪ ಪಟ್ಟಿ ದಾಖಲಿಸಲಾಗಿದೆ. ಆದರೆ, ಪ್ರಬಲ ಸಾಕ್ಷ್ಯಾಧಾರ ಸಲ್ಲಿಸಲಾಗಿಲ್ಲ. ಆರೋಪ ಪಟ್ಟಿಯಲ್ಲಿ ಸಂಪತ್‍ರಾಜ್ ಹೆಸರನ್ನು ತಡವಾಗಿ ದಾಖಲಿಸಲಾಗಿದೆ. ಇದು ರಾಜಕೀಯ ವೈಷಮ್ಯದ ಕೇಸು ಎಂದು ವಾದ ಮಂಡಿಸಿದ್ದರು. ವಾದ-ವಿವಾದ ಆಲಿಸಿದ ನ್ಯಾಯಾಧೀಶರು ಹಲವು ಶರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದರು.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement