ಮೈಸೂರು: ರಾಜಕೀಯವಾಗಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಮತ್ತೆ ಅಹಿಂದ ಕೂಗು ಎಬ್ಬಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಜಿಲ್ಲಾ ಪ್ರತಕರ್ತರ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಹಿಂದ ಹೋರಾಟ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಸದ್ಯಕ್ಕೆ ಇದು ಅಪ್ರಸ್ತುತ ಎಂದರು.
ಅಹಿಂದ ಕೂಗು ಎತ್ತುತ್ತಿರುವವರು ರಾಜಕೀಯವಾಗಿ ಮೂಲೆ ಗುಂಪಾಗಿದ್ದಾರೆ. ರಾಜಕೀಯಕ್ಕಾಗಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಅಹಿಂದ ಕೂಗು ಎತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಪರಸ್ಪರ ವೈಯುಕ್ತಿಕವಾಗಿ ವಿಶ್ವಾಸ ಈಗಲೂ ಹಾಗೆಯೇ ಇದೆ ಎಂದರು.
ಕೊರೊನಾದಿಂದ ರಾಜ್ಯ ಸರ್ಕಾರಕ್ಕೆ ವರಮಾನ ಕಮ್ಮಿಯಾಗಿದೆ. ಹಾಗಾಗಿ ಪೆಟ್ರೋಲ್ ಮೇಲಿನ ಸೆಸ್ ಹೆಚ್ಚಿಸಲಾಗಿದೆ ಎಂದು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ