ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ದಿಢೀರನೆ ದೆಹಲಿಗೆ ತೆರಳಿರುವುದು ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ವರಿಷ್ಠರ ಸೂಚನೆಯಂತೆ ಶನಿವಾರ ಬೆಳಗ್ಗೆ ನವದೆಹಲಿಗೆ ತೆರಳಿರುವ ಅವರು ಎರಡು ದಿನಗಳ ಕಾಲ ರಾಷ್ಟ್ರ ರಾಜಧಾನಿಯಲ್ಲೇ ಉಳಿಯಲಿದ್ದು, ಪಕ್ಷದ ಕೆಲವು ನಾಯಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/ಯಾವ ಕಾರಣಕ್ಕಾಗಿ ಅವರು ದೆಹಲಿಗೆ ತೆರಳಿದ್ದಾರೆ ಎಂಬುದು ಖಚಿತಪಟ್ಟಿಲ್ಲ. ಮೂಲಗಳ ಪ್ರಕಾರ ಪಕ್ಷದ ನಾಯಕರ ಸೂಚನೆ ಮೇರೆಗೆ ಅವರು ಹೋಗಿದ್ದಾರೆ ಎನ್ನಲಾಗಿದೆ. ಒಂದೆಡೆ ಮುಖ್ಯಮಂತ್ರಿ.ಯಡಿಯೂರಪ್ಪ ಅವರ ನಾಯಕತ್ವದ ಬಗ್ಗೆ ಕೇಳಿಬರುತ್ತಿರುವ ಅಪಸ್ವರಗಳು, ಮತ್ತೊಂದೆಡೆ ವಿವಿಧ ಸಮುದಾಯಗಳು ಮೀಸಲಾತಿ ಹೆಚ್ಚಳ ಮಾಡುವುದು, ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು ಪ್ರತಿಭಟನೆ, ಹೋರಾಟ, ಪಾದಯಾತ್ರೆ ಇವೆಲ್ಲವೂ ಹೈಕಮಾಂಡ್ ವರೆಗೆ ತಲುಪಿದೆ.
ಈ ನಡುವೆ ಮಸ್ಕಿ, ಬಸವ ಕಲ್ಯಾಣ, ಸಿಂದನೂರು ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ಆಯೋಗ ಯಾವುದೇ ಸಂದರ್ಭದಲ್ಲಿ ಚುನಾವಣೆ ಘೋಷಣೆ ಮಾಡಬಹುದಾಗಿದೆ. ಹೀಗಾಗಿ ಅಶ್ವತ್ಥನಾರಾಯಣ ಅವರ ದೆಹಲಿ ಭೇಟಿ ಮಹತ್ವ ಪಡೆದಿದೆ.
ಕೇರಳ ರಾಜ್ಯದ ಸಹ ಉಸ್ತುವಾರಿಯಾಗಿರುವ ಅಶ್ವತ್ಥನಾರಾಯಣ ಅವರು, ಪಕ್ಷ ಸಂಘಟನೆ ಬಗ್ಗೆಯೂ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ