ತಮಿಳುನಾಡಿನ ವಿರುಧ್‌ನಗರ ಜಿಲ್ಲೆಯಲ್ಲಿ ನಡೆದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ೧೫ಕ್ಕೇರಿದೆ.
20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ವಿರುಧ್ ನಗರ್ ಜಿಲ್ಲೆಯ ಸತ್ತೂರು ಬಳಿಯ ಅಚಂಕುಲಂನಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಮಧ್ಯಾಹ್ನ 1:45ಕ್ಕೆ ಸ್ಫೋಟ ಸಂಭವಿಸಿತ್ತು. ಅಗ್ನಿಶಾಮಕ ದಳದ ಸುಮಾರು ೩೦ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಗಾಯಾಳುಗಳಿಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ನಿಮ್ಮ ಕಾಮೆಂಟ್ ಬರೆಯಿರಿ