ಪ್ರತಿಭಟಿಸುವ ಸ್ವಾತಂತ್ರ್ಯ ಎಲ್ಲ ಸಮಯದಲ್ಲಿ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಪ್ರತಿಭಟಿಸುವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಎಲ್ಲ ಸಮಯದಲ್ಲಿ ಮತ್ತು ಎಲ್ಲೆಡೆ ಇರಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ.
ಪೌರತ್ವ ಕಾಯಿದೆ ವಿರೋಧಿಸಿ ದೆಹಲಿಯ ಶಹೀನ್‌ಭಾಗ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಈ ಹಿಂದೆ ಸರ್ವೋಚ್ಚ ನ್ಯಾಯಾಲಯ ಕಾನೂನುಬಾಹಿರ ಎಂದು ಹೇಳಿತ್ತು. ಇದನ್ನು ಮರುಪರಿಶೀಲನೆ ಮಾಡುವಂತೆ ಕೋರಿ 12 ಸಾಮಾಜಿಕ ಕಾರ್ಯಕರ್ತರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಮರುಪರಿಶೀಲನೆಗೆ ನಿರಾಕರಿಸಿರುವ ಸರ್ವೋಚ್ಚ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಪ್ರತಿಭಟಿಸುವ ಹಕ್ಕು ಎಲ್ಲಾ ಸಮಯದಲ್ಲಿ ಮತ್ತು ಎಲ್ಲೆಡೆ ಇರದು. ಕೆಲವೊಮ್ಮೆ ತತ್‌ಕ್ಷಣದ ಪ್ರತಿಭಟನೆಗಳು ನಡೆಯಬಹುದು. ಆದರೆ ದೀರ್ಘಕಾಲದ ಪ್ರತಿಭಟನೆಯ ಸಂದರ್ಭದಲ್ಲಿ, ಸಾರ್ವಜನಿಕ ಸ್ಥಳವನ್ನು ನಿರಂತರವಾಗಿ ಆಕ್ರಮಿಸಿಕೊಳ್ಳುವುದು ಸರಿಯಲ್ಲ. ಇವು ಇತರರ ಹಕ್ಕುಗಳ ಮೇಲೆ ಇವು ಪರಿಣಾಮ ಬೀರುತ್ತವೆ ಎಂದು ಸುಪ್ರೀಂ ಕೋರ್ಟ್‌ ನ್ಯಾಯಪೀಠ ಹೇಳಿದೆ.
ಪ್ರತಿಭಟನೆಗಾಗಿ ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸುವುದು ಸರಿಯಲ್ಲ ಮತ್ತು ಸಾರ್ವಜನಿಕ ಪ್ರತಿಭಟನೆಗಳು ‘ಗೊತ್ತುಪಡಿಸಿದ ಪ್ರದೇಶಗಳಲ್ಲಿ ಮಾತ್ರ’ ಇರಬೇಕು ಎಂದು ಮೂರು ನ್ಯಾಯಾಧೀಶರ ನ್ಯಾಯಪೀಠ ಪುನರುಚ್ಚರಿಸಿದೆ.
2019ರಲ್ಲಿ ದಿಲ್ಲಿಯ ಶಹೀನ್‌ಬಾಗ್‌ ಸಿಎಎ ವಿರೋಧಿಸಿ ಮಹಿಳೆಯರು ಮತ್ತು ಮಕ್ಕಳು ಸುಮಾರು ಮೂರು ತಿಂಗಳ ಕಾಲ ಇಲ್ಲಿ ರಸ್ತೆಯ ಮೇಲೆಯೇ ಕುಳಿತು ಪ್ರತಿಭಟನೆ ನಡೆಸಿದ್ದರು.

ಪ್ರಮುಖ ಸುದ್ದಿ :-   ಉಪ ಸಭಾಪತಿ ಹುದ್ದೆ ನೀಡದಿದ್ರೆ ಸ್ಪೀಕರ್ ಸ್ಥಾನಕ್ಕೆ ವಿಪಕ್ಷಗಳಿಂದ ಸ್ಪರ್ಧೆ..?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement