ಫೆ.೨೧ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಪಂಚಸಾಲಿಗಳ ಬೃಹತ್‌ ಸಮಾವೇಶ

ತುಮಕೂರು: ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ೨ಎ ಮೀಸಲಾತಿಗಾಗಿ ಆಗ್ರಹಿಸಿ ಪಾದಯಾತ್ರೆ ಕೈಗೊಂಡಿದ್ದು, ಫೆ. ೨೧ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವ ತೀರ್ಮಾನವನ್ನು ಕೈಗೊಂಡಿದೆ.
ನಗರದ ಸಿದ್ದಗಂಗಾ ಮಠದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಪಾದಯಾತ್ರಿಗಳುಶುಕ್ರವಾರ ಬೆಳಿಗ್ಗೆ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಹಾಗೂ ವಿಜಯಾನಂದ ಕಾಶಪ್ಪನವರ್ ನೇತೃತ್ವದಲ್ಲಿ ಸಭೆ ನಡೆಸಿ ಅರಮನೆ ಮೈದಾನದಲ್ಲೆ ಸಮಾವೇಶ ನಡೆಸುವಕುರಿತು ನಿರ್ಣಯ ಮಾಡಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ, ಫೆ. ೨೧ರಂದು ರಾಜ್ಯ ಸರ್ಕಾರದ ಗಮನ ಸೆಳೆಯಲು ಪಂಚಮಸಾಲಿ ಬೃಹತ್ ಸಮಾವೇಶ ನಡೆಸಲು ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಸಮಾವೇಶ ನಡೆಸುವ ಜಾಗದ ಕುರಿತು ನಿಗದಿಯಾಗಿರಲಿಲ್ಲ. ಈಗ ಅರಮನೆ ಮೈದಾನದಲ್ಲಿ ಸಮಾವೇಶ ನಡೆಸಲು ತೀರ್ಮಾನಿಸಲಾಯಿತು ಎಂದರು.
ಸುಮಾರು ೧೦ ಲಕ್ಷಕ್ಕೂ ಅಧಿಕ ಪಂಚಮಸಾಲಿಗಳು ಆಗಮಿಸುವ ನಿರೀಕ್ಷೆ ಇದೆ. ಫೆ. ೨೧ ರಂದು ಅರಮನೆ ಮೈದಾನದಲ್ಲಿ ಪಂಚಮಸಾಲಿ ಮೀಸಲಾತಿ ಹಕ್ಕೊತ್ತಾಯದ ಬೃಹತ್‌ ಸಮಾವೇಶ ನಡೆಯಲಿದ್ದು, ಅಂದು ಸಂಜೆ ೪ ಗಂಟೆಯೊಳಗಾಗಿ ಮುಖ್ಯಮಂತ್ರಿಗಳು ವರದಿಯನ್ನು ತರಿಸಿಕೊಳ್ಳದಿದ್ದರೆ ಅಂದು ಸಂಜೆಯಿಂದಲೇ ವಿಧಾನಸೌಧಕ್ಕೆ ತೆರಳಿ ಮಾರ್ಚ್ ೪ರ ವರೆಗೆ ವಿಧಾನಸೌಧದ ಮುಂಭಾಗದಲ್ಲೇ ಧರಣಿ ಮಾಡುತ್ತೇವೆ ಎಂದರು.
ಮಾ. ೪ರ ವರೆಗೂ ಮೀಸಲಾತಿ ಸಂಬಂಧನಿರ್ಣಯ ಕೈಗೊಳ್ಳದಿದ್ದರೆ ಬಜೆಟ್ ಅಧಿವೇಶನ ಸಂದರ್ಭದಲ್ಲಿ ಆಮರಣಾಂತ ಉಪವಾಸ ಮಾಡಲಾಗುವುದು ಎಂದರು..
ಮೀಸಲಾತಿ ಪ್ರಮಾಣ ಪತ್ರವನ್ನು ಪಡೆಯದ ಹೊರತು ಊರಿಗೆ ವಾಪಸ್ಸಾಗುವುದಿಲ್ಲ. ಫೆ. ೨೧ ರೊಳಗಾಗಿಯೇ ಮುಖ್ಯಮಂತ್ರಿ ಯಡಿಯೂರಪ್ಪನವರು ನಮಗೆ ಮೀಸಲಾತಿ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement