ಮೀಸಲಾತಿ ಬೇಡಿಕೆ: ಕಾನೂನು ಚೌಕಟ್ಟಿನೊಳಗೆ ನ್ಯಾಯ ಒದಗಿಸುವ ಭರವಸೆ

ಮೈಸೂರು:ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲಾತಿ ಹೋರಾಟ ಆರಂಭಿಸಿವೆ. ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ‌ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಮೀಸಲಾತಿ ಹೋರಾಟ ಸಂಬಂಧ ತಜ್ಞರ ಜೊತೆ ಚರ್ಚೆಗಳು ನಡೆದಿವೆ. ಎಲ್ಲ ಸಮುದಾಯಗಳಿಗೆ ಕಾನೂನು ಚೌಕಟ್ಟಿನಲ್ಲಿ ಏನೆಲ್ಲ ಸಾಧ್ಯವೂ ಅದನ್ನು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು..

ಮೀಸಲಾತಿಗಾಗಿ ನಾಯಕ, ಕುರುಬ, ವೀರಶೈವ ಪಂಚಮ‌ಸಾಲಿ ಸೇರಿದಂತೆ ವಿವಿಧ ಸಮುದಾಯಗಳು ಬೀದಿಗಿಳಿದು ಹೋರಾಟ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಎಲ್ಲರ ಹಿತ ಕಾಪಾಡುವುದಾಗಿ ಅವರು ತಿಳಿಸಿದ್ದಾರೆ
ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಟೀಕಾಕಾರರ ಆರೋಪಗಳಿಗೆ ಬಜೆಟ್ ಮಂಡನೆಯಾದ ನಂತರ ಉತ್ತರ ಸಿಗಲಿದೆ ಎಂದು
ವಿಹೇಳಿದರು.

ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ ಎಂದು ಹೇಳಿದರು

ಮುಂಬರುವ ಬಜೆಟ್ ನಲ್ಲಿ ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಒತ್ತು ನೀಡುವ ಉದ್ದೇಶವಿದೆ. ಯಾವ ಯಾವ ಕ್ಷೇತ್ರಗಳಿಗೆ ಬಜೆಟ್ ನಲ್ಲಿ ಒತ್ತು ನೀಡಲಾಗುತ್ತಿದೆ ಎನ್ನುವುದನ್ನು ಕಾದು ನೋಡಿ ಎಂದು ಅವರು ತಿಳಿಸಿದರು.

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement