18 ಸಾವಿರ  ಕೋಟಿ  ಅದಿರು ನಿಧಿ ಬಳಕೆಗೆ ಕೇಂದ್ರದಿಂದ ಕಾನೂನು ನೆರವು ಕೋರಿದ ನಿರಾಣಿ 

ನವದೆಹಲಿ: ಸುಪ್ರೀಂಕೋರ್ಟ್ ನಿದೇರ್ಶನದಂತೆ ಕಳೆದ ಆರು ವರ್ಷಗಳಿಂದ ಕಬ್ಬಿಣದ ಅದಿರು ಗಣಿ ಕಂಪನಿಗಳಿಂದ  ಸಂಗ್ರಹಿಸಿರುವ ಸುಮಾರು 18 ಸಾವಿರ ಕೋಟಿ ರೂಪಾಯಿಯನ್ನು ಕರ್ನಾಟಕಕ್ಕೆ ನೀಡುವ ನಿಟ್ಟಿನಲ್ಲಿ ಕಾನೂನು ಮತ್ತು ಆಡಳಿತಾತ್ಮಕ ನೆರವು ನೀಡಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಸಚಿವ  ಮುರುಗೇಶ್ ನಿರಾಣಿ, ಕೇಂದ್ರ ಗಣಿ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.
ಶನಿವಾರ ನವದೆಹಲಿಯಲ್ಲಿ ಈ ಸಂಬಂಧ ಭೇಟಿ ಮಾಡಿದ ಅವರು ಅಧಿಕೃತವಾಗಿ ರಾಜ್ಯದ ಪರವಾಗಿ ಮನವಿಪತ್ರ ಸಲ್ಲಿಸಿದರು. ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಕಬ್ಬಿಣದ ಅದಿರು ಗಣಿಗಾರಿಕೆ ನಡೆಸಿರುವ ದಂಡ ಮತ್ತು ಸುಂಕದ (ಲೆವಿ) ರೂಪದಲ್ಲಿ ಸಂಗ್ರಹಿಸಿದ ಸುಮಾರು 18,000 ಕೋಟಿ ರೂ.ಗಳನ್ನು ಸಂಗ್ರಹಿಸಲಾಗಿದೆ. ಆ ಹಣವನ್ನು ಗಣಿಗಾರಿಕೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ರೂಪು ರೇಷೆ ಸಿದ್ಧಪಡಿಸುವ ಕುರಿತಂತೆ  ಕೇಂದ್ರ ಪ್ರಹ್ಲಾದ್ ಜೋಶಿ ಜೊತೆ ನಿರಾಣಿ ಸಮಗ್ರವಾಗಿ ಚರ್ಚಿಸಿದ್ದಾರೆ.
ನಿಧಿ ಬಳಕೆಗೆ ನ್ಯಾಯಾಲಯವು ಅನುಮತಿ ನೀಡಿದರೆ,  ಬಳ್ಳಾರಿ, ಚಿತ್ರದುರ್ಗ, ಬಾಗಲಕೋಟೆ ಮತ್ತು ತುಮಕೂರು ಸೇರಿದಂತೆ ಗಣಿಗಾರಿಕೆ ನಡೆಯುವ ಪ್ರದೇಶಗಳಲ್ಲಿ ಈ ಭಾಗದ ಜನರಿಗೆ ಪುನರ್ವಸತಿಗೆ ಅವಕಾಶ ನೀಡುವ ಕುರಿತು ಮನವಿ ಮಾಡಿದರು. ಈಗಾಗಲೇ ಒಡಿಸ್ಸಾದಲ್ಲಿ ಗಣಿಗಾರಿಕೆ ಚಟುವಟಿಕೆ ನಡೆಸಿದ ಕಂಪೆನಿಗಳನ್ನು ಆಯಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ಮತ್ತಿತರ ಅಗತ್ಯತೆಗಳನ್ನು ಕಲ್ಪಿಸಿಕೊಡಲು ಅನುಮತಿ ನೀಡಿತ್ತು. ನಮ್ಮ ರಾಜ್ಯದ ಒಂದು ಪ್ರಕರಣದಲ್ಲಿ ಇದೇ ರೀತಿಯ ಆದೇಶ ಬಂದಿತ್ತು ಎಂಬುದನ್ನು ತಿಳಿಸಿದರು.
ಪ್ರಸ್ತುತ ನ್ಯಾಯಾಲಯದ ಅಧೀನದಲ್ಲಿರುವ 18 ಸಾವಿರ ಕೋಟಿ ಮುಂದೆ ಸಂಗ್ರಹವಾಗಲಿರುವ ರಾಜಧನ ಸೇರಿದಂತೆ ಒಟ್ಟು 25 ಸಾವಿರ ಕೋಟಿ ರೂ. ಕ್ರಿಯಾ ಯೋಜನೆಯನ್ನು ಇಲಾಖೆ ಸಿದ್ಧಪಡಿಸಿದೆ. ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಖನಿಜ ನಿಧಿ ಅಡಿ 2,200 ಕೋಟಿ ರೂ. ಸಂಗ್ರಹವಾಗಿದೆ. ಕೇಂದ್ರ ಸರ್ಕಾರ ನಮಗೆ ಅಗತ್ಯವಾದ ನೆರವು ನೀಡಬೇಕೆಂದು ಒತ್ತಾಯ ಮಾಡಿದರು.
ಬಾಕಿ ಪ್ರಸ್ತಾವನೆಗಳಿಗೆ ಅನುಮತಿ ಕೊಡಿ:
ಭೇಟಿಯ ಸಂದರ್ಭದಲ್ಲಿ ಸಚಿವ ನಿರಾಣಿ ಅವರು ರಾಜ್ಯದಲ್ಲಿ  ಹಲವು ವರ್ಷಗಳಿಂದ  ನೆನೆಗುದಿಗೆ ಬಿದ್ದಿರುವ ಗಣಿಗಾರಿಕೆ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಕೂಡ ಕೇಂದ್ರ ಸಚಿವ ಜೋಶಿಯವರ ಜೊತೆ ಚರ್ಚಿಸಿದ್ದಾರೆ.
ಮೈಸೂರು ಮಿನರಲ್ಸ್ ಲಿಮಿಟೆಡ್‌ ಎಂಬ ಸಂಸ್ಥೆಯ ಹೆಸರನ್ನು ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ಎಂದು ಬದಲಾಯಿಸುವ ಪ್ರಸ್ತಾವನೆಯೂ ಸೇರಿದಂತೆ, ಉಡುಪಿ ಜಿಲ್ಲೆಯ  ಬೈಂದೂರು ತಾಲ್ಲೂಕಿನ ಪಡುವರಿ, ಯಡಿಟರೆ ಮತ್ತು ಬೈಂದೂರುಗಳಲ್ಲಿ  ಬಾಕ್ಸೈಟ್ ಖನಿಜಕ್ಕಾಗಿ  120.60 ಹೆಕ್ಟೇರ್ ಪ್ರದೇಶವನ್ನು ಕಾಯ್ದಿರಿಸಲಾಗಿದೆ.  ಕುಂದಾಪುರ ತಾಲ್ಲೂಕಿನ ಪಡುವರೆ ಗ್ರಾಮದಲ್ಲಿ 23.80 ಹೆಕ್ಟೇರ್‌ ಪ್ರದೇಶವನ್ನು ಕಾಯ್ದಿರಿಸಲಾಗಿದೆ. ಈ ಪ್ರಸ್ತಾಪವು ಕೇಂದ್ರದ ಮುಂದೆ ಬಾಕಿ ಉಳಿದಿದೆ. ಅಂತೆಯೇ ಬಳ್ಳಾರಿ ಜಿಲ್ಲೆಯ  ಸಂಡೂರು ತಾಲ್ಲೂಕಿನಲ್ಲಿ ಗಣಿಗಾರಿಕೆಗಾಗಿ 145.00 ಹೆಕ್ಟೇರ್ ಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆ ಕೂಡ ಕೇಂದ್ರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (ಎಂಒಇಎಫ್ ಮತ್ತು ಸಿಸಿ) ಬಾಕಿ ಇದೆ. ಈ ಬಗ್ಗೆ ಕರ್ನಾಟಕ  ಅರಣ್ಯ ಮತ್ತು ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ 2020ರ ಮೇ ಅನುಮೋದನೆ ನೀಡುವ ಬಗ್ಗೆ ಕೋರಿತ್ತು. ಗಣಿಕಾರಿಕೆ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡಿದರೆ ರಾಜ್ಯದ ವರಮಾನ ಹೆಚ್ಚಾಗಲಿದೆ. ಈ ಬಗ್ಗೆ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಬೇಕೆಂದು ರಾಜ್ಯ ಸರ್ಕಾರದ ಪರವಾಗಿ ಕೇಂದ್ರ ಸಚಿವರಿಗೆ ನಿರಾಣಿ  ಅವರು ವಿನಂತಿ ಮಾಡಿಕೊಂಡಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಈ ಸಂಬಂಧ ಸೂಕ್ತ ತೀರ್ಮಾನ ತೆಗೆದುಕೊಳ್ಳುವ ಭರವಸೆಯನ್ನೂ ನೀಡಿದರು. ಕ. ಸದ್ಯದಲ್ಲೇ  ಅಧಿಕಾರಿಗಳ ಸಭೆ ಕರೆದು ಕಾನೂನಿನ ವ್ಯಾಪ್ತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ನಿರ್ದೇಶನ ನೀಡುವುದಾಗಿ ಭರವಸೆ ನೀಡಿದ್ದಾರೆ.
ಇದಕ್ಕೂ ಮುನ್ನ ಬೆಳಗ್ಗೆ ಕರ್ನಾಟಕ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಸಚಿವ ನಿರಾಣಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ತೆಗೆದುಕೊಂಡಿರುವ ಸುಧಾರಣಾ ಕ್ರಮಗಳನ್ನು ಸಚಿವರ ಗಮನಕ್ಕೆ ತರುವುದಾಗಿ ಹೇಳಿದ್ದರು.ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಏಕ ಗವಾಕ್ಷಿ ಪದ್ಧತಿ, ನಾಲ್ಕು ಕಂದಾಯ ವಿಭಾಗಗಳಲ್ಲಿ ಗಣಿ ಅದಾಲತ್, ಜಿಲ್ಲಾಧಿಕಾರಿ, ಸಚಿವರು ಮತ್ತು ಮುಖ್ಯಮಂತ್ರಿ ನೇತೃತ್ವದ ಸಮಿತಿ ರಚನೆ , ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಮರಳು ವಿತರಣೆ ಸೇರಿದಂತೆ ಹಲವು ರೀತಿಯ ಸುಧಾರಣಾ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಹುಕ್ಕೇರಿ : ಹಳ್ಳದ ನೀರಿನಲ್ಲಿ ಸಿಲುಕಿದ ಶಾಲಾ ಬಸ್‌ ; ತಪ್ಪಿದ ಅನಾಹುತ

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement