ಜಮ್ಮು ಬಸ್‌ ನಿಲ್ದಾಣದಲ್ಲಿ ಸುಧಾರಿತ ಸ್ಫೋಟಕ ಸಾಧನ ಪತ್ತೆ: ತಪ್ಪಿದ ಅನಾಹುತ

ಜಮ್ಮು: ಜಮ್ಮು ಬಸ್‌ ನಿಲ್ದಾಣದಲ್ಲಿ ೭ಕೆಜಿ ಸುಧಾರಿತ ಸ್ಫೋಟಕ ಸಾಧನ ಪತ್ತೆಯಾಗಿದೆ.
ಜನಸಂದಣಿ ಪ್ರದೇಶದಲ್ಲಿ ಸ್ಫೋಟಕ ಸಾಧನವನ್ನು ಪತ್ತೆ ಮಾಡಲಾಗಿದ್ದು, ಅನಾಹುತ ತಪ್ಪಿಸಿದಂತಾಗಿದೆ. ಪುಲ್ವಾಮಾ ದಾಳಿಯ ೨ನೇ ವರ್ಷಾಚರಣೆ ಸಂದರ್ಭದಲ್ಲಿ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆಯನ್ನು ವಿಫಲಗೊಳಿಸಲಾಗಿದೆ.
ನಿರ್ದಿಷ್ಟ ಮಾಹಿತಿಯನ್ನಾಧರಿಸಿ ನಡೆದ ಕಾರ್ಯಚರಣೆಯಲ್ಲಿ ಸ್ಫೋಟಕವನ್ನು ಪತ್ತೆ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ೨೦೧೯ರ ಫೆಬ್ರವರಿ ೧೪ರಂದು ಸಿಆರ್‌ಪಿಎಫ್‌ ಯೋಧರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ೪೦ ಯೋಧರು ಜೀವ ಕಳೆದುಕೊಂಡಿದ್ದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಮತದಾನಕ್ಕೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ...!

ನಿಮ್ಮ ಕಾಮೆಂಟ್ ಬರೆಯಿರಿ

advertisement