ದೆಹಲಿ: ರೈತರ ಪ್ರತಿಭಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟೂಲ್‌ಕಿಟ್ ಹಂಚಿಕೆ ಹಾಗೂ ಸಂಪಾದನೆ ಆರೋಪಕ್ಕಾಗಿ ಬಂಧಿತ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ದೆಹಲಿ ನ್ಯಾಯಾಲಯ ೫ ದಿನಗಳ ಪೊಲೀಸ್ ವಶಕ್ಕೆ ನೀಡಿದೆ.
ಬೆಂಗಳೂರಿನಿಂದ ದೆಹಲಿ ಪೊಲೀಸರ ಸೈಬರ್ ಸೆಲ್ ತಂಡವು ೨೧ರ ಹರೆಯದ ದಿಶಾ ರವಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತು. ಕೇಂದ್ರ ಸರ್ಕಾರದ ವಿರುದ್ಧ ದೊಡ್ಡ ಪಿತೂರಿ ನಡೆಸಲಾಗಿದೆ ಎಂದು ತನಿಖೆ ನಡೆಸಲು ಮತ್ತು ಖಲಿಸ್ತಾನ್ ಆಂದೋಲನಕ್ಕೆ ಸಂಬಂಧಿಸಿದ ಆಕೆಯ ಪಾತ್ರವನ್ನು ಖಚಿತಪಡಿಸಿಕೊಳ್ಳಲು ಅವಳ ಕಸ್ಟಡಿ ಅಗತ್ಯವಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರು.
ವಿಚಾರಣೆಯ ಸಮಯದಲ್ಲಿ, ದಿಶಾ ನ್ಯಾಯಾಧೀಶರ ಎದುರು ತಮ್ಮ ಅಳಲು ತೋಡಿಕೊಂಡರು. ತಾನು ಕೇವಲ ಎರಡು ಸಾಲುಗಳನ್ನು ಮಾತ್ರ ಸಂಪಾದಿಸಿದ್ದೇನೆ. ರೈತರ ಪ್ರತಿಭಟನೆಯನ್ನು ಬೆಂಬಲಿಸುವುದು ನನ್ನ ಉದ್ದೇಶವಾಗಿತ್ತು ಎಂದು ಹೇಳಿದರು.
ಖಂಡನೆ: ೨೧ರ ಹರೆಯದ ಸಾಮಾಜಿಕ ಕಾರ್ಯಕರ್ತೆಯನ್ನು ಬಂಧಿಸಿರುವುದನ್ನು ಹಲವರು ಖಂಡಿಸಿದ್ದಾರೆ.
ಕಾಂಗ್ರೆಸ್ ಹಿರಿಯ ಮುಖಂಡ ಜೈರಾಮ್ ರಮೇಶ್ ಇದನ್ನು ದೌರ್ಜನ್ಯ ಎಂದು ಕರೆದಿದ್ದು, ದಿಶಾ ಅವರಿಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಟ್ವೀಟ್ ಮಾಡಿದ್ದಾರೆ. ಸಿಪಿಐಎಂ ಮುಖಂಡರು ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರು ಕೂಡ ದಿಶಾ ರವಿ ಅವರ ಬಂಧನವನ್ನು ಖಂಡಿಸಿದ್ದಾರೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ