ಚೆನ್ನೈ: ಸಮರ್ಪಕವಾಗಿ ಜಲ ಸಂಪನ್ಮೂಲಗಳನ್ನು ಬಳಸಿಕೊಂಡು ದಾಖಲೆ ಪ್ರಮಾಣದ ಆಹಾರಧಾನ್ಯ ಉತ್ಪಾದನೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ರೈತರನ್ನು ಶ್ಲಾಘಿಸಿದ್ದಾರೆ.
ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿ, ರಾಜ್ಯದ ರೈತರು ದಾಖಲೆ ಪ್ರಮಾಣದಲ್ಲಿ ಆಹಾರಧಾನ್ಯ ಬೆಳೆದಿರುವುದು ಶ್ಲಾಘನೀಯ. ರೈತರು ಸಮರ್ಪಕವಾಗಿ ಜಲ ಸಂಪನ್ಮೂಲಗಳನ್ನು ಬಳಸಿಕೊಂಡು ಸಾಧನೆ ಮಾಡಿದ್ದಾರೆ ಎಂದರು.
ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಉತ್ತರ ಭಾರತದಲ್ಲಿ ರೈತರು ಕಳೆದ ೨ ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಹೇಳಿಕೆ ಮಹತ್ವ ಪಡೆದುಕೊಂಡಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ