ಮೈಸೂರು: ಎಲ್ಲ ಸಮುದಾಯಗಳಲ್ಲಿಯೂ ತುಳಿತಕ್ಕೊಳಗಾದವರಿದ್ದು, ಅಂಥವರಿಗೆ ಮೀಸಲಾತಿ ಸೌಲಭ್ಯ ದೊರೆಯಬೇಕು ಎಂದು ಸುತ್ತೂರು ಶ್ರೀ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ರಾಜ್ಯದಲ್ಲಿ ಮೀಸಲಾತಿಗಾಗಿ ಹಲವು ಸಮುದಾಯದವರು ಹೋರಾಟ ನಡೆಸುತ್ತಿದ್ದಾರೆ. ಸೌಲಭ್ಯ ವಂಚಿತರಿಗೆ ಸೌಲಭ್ಯ ಒದಗಿಸುವ ಕೆಲಸವನ್ನು ಸರಕಾರ ಸಮರ್ಪಕವಾಗಿ ಮಾಡಬೇಕು ಎಂದರು.
ಒಂದು ಸಮುದಾಯದಲ್ಲಿ ನಾಲ್ಕಾರು ಜನರು ಸೌಲಭ್ಯ ಪಡೆದುಕೊಂಡಿದ್ದಾರೆಂದರೆ ಎಲ್ಲರೂ ಸೌಲಭ್ಯ ಪಡೆದುಕೊಂಡಂತಲ್ಲ. ತುಳಿತಕ್ಕೊಳಗಾದವರನ್ನು ಗುರುತಿಸಿ ಅವರಿಗೆ ಸೌಲಭ್ಯಗಳನ್ನು ಕೊಡಿಸುವುದು ಸರಕಾರದ ಜವಾಬ್ದಾರಿಯಾಗಿದೆ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ