ಪುಲ್ವಾಮಾ ಘಟನೆಗೆ ೨ ವರ್ಷ: ಹುತಾತ್ಮರಿಗೆ ಪ್ರಧಾನಿ ಗೌರವ

ನವದೆಹಲಿ: ಪುಲ್ವಾಮಾ ಭಯೋತ್ಪಾದಕರ ದಾಳಿಯ ೨ನೇ ವಾರ್ಷಿಕೋತ್ಸವದಂದು ಪ್ರಧಾನಿ ಮೋದಿ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು.
ಯಾವುದೇ ಭಾರತೀಯನು ಈ ಕರಾಳ ದಿನವನ್ನು ಮರೆಯಲು ಸಾಧ್ಯವಿಲ್ಲ. ಎರಡು ವರ್ಷಗಳ ಹಿಂದೆ, ಪುಲ್ವಾಮಾ ದಾಳಿ ಸಂಭವಿಸಿದೆ. ಆ ದಾಳಿಯಲ್ಲಿ ನಾವು ಕಳೆದುಕೊಂಡ ಎಲ್ಲ ಹುತಾತ್ಮರಿಗೆ ನಾವು ಗೌರವ ಸಲ್ಲಿಸುತ್ತೇವೆ. ನಮ್ಮ ಭದ್ರತಾ ಪಡೆಗಳ ಬಗ್ಗೆ ನಮಗೆ ಹೆಮ್ಮೆ ಇದೆ. ಅವರ ಧೈರ್ಯವು ಯುವ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ತಿಳಿಸಿದರು.
ದಾಳಿಯಲ್ಲಿ ಮೃತಪಟ್ಟ ಸಿಆರ್‌ಪಿಎಫ್ ಸಿಬ್ಬಂದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್‌ ಶಾ, ಕಾಂಗ್ರೆಸ್‌ ಮುಖಂಡರಾದ ಪ್ರಿಯಾಂಕಾ ಗಾಂಧಿ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ ಗೌರವ ಸಲ್ಲಿಸಿದ್ದಾರೆ.
2019 ರ ಫೆಬ್ರವರಿ 14 ರಂದು ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಕನಿಷ್ಠ 40 ಸಿಆರ್‌ಪಿಎಫ್ ಸೈನಿಕರು ಸಾವನ್ನಪ್ಪಿದ್ದರು. ಸಿಆರ್‌ಪಿಎಫ್ ಯೋಧರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಸ್ಫೋಟಕ ತುಂಬಿದ ಎಸ್‌ಯುವಿ ಬಸ್‌ಗೆ ಡಿಕ್ಕಿ ಹೊಡೆಸಿ ಸ್ಫೋಟಿಸಲಾಗಿತ್ತು.

ಪ್ರಮುಖ ಸುದ್ದಿ :-   ಕಾಸರಗೋಡು: ಸಂಪೂರ್ಣ ದರ್ಶನ ನೀಡಿದ ಅನಂತಪುರ ದೇವಸ್ಥಾನದ ಮೊಸಳೆ ಮರಿ ಬಬಿಯಾ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement