ಮೀಸಲಾತಿ ಹೋರಾಟ : ಕಾನೂನು ಚೌಕಟ್ಟಿನಲ್ಲಿ ಎಲ್ಲರಿಗೂ ಅವಕಾಶ

ದಾವಣಗೆರೆ:ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲಾತಿಗಾಗಿ ನಡೆಸುತ್ತಿರು ಹೋರಾಟ ನ್ಯಾಯಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ದಾವಣಗೆರೆಯಲ್ಲಿ ರವಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾನೂನಿನ ಚೌಕಟ್ಟಿನಲ್ಲಿ ಅವರಿಗೆ ಹೇಗೆ ಮೀಸಲಾತಿ ಕಲ್ಪಿಸಬೇಕು ಎನ್ನುವ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಅವರು ಭರವಸೆ ನೀಡಿದ್ದಾರೆ.
ವೀರಶೈವ- ಲಿಂಗಾಯತ, ವಾಲ್ಮೀಕಿ, ಕುರುಬ ಸಮುದಾಯ ಸೇರಿದಂತೆ ಮೀಸಲಾತಿಗಾಗಿ ಹೋರಾಟ ಮಾಡುತ್ತಿರುವ ಎಲ್ಲ ಸಮುದಾಯಗಳ ಸ್ವಾಮೀಜಿಗಳಿಗೆ ಆತಂಕ ಬೇಡ. ಸಂವಿಧಾನದ ಚೌಕಟ್ಟಿನಲ್ಲಿ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಶೀಘ್ರದಲ್ಲಿ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ವಿವಿಧ ಸಮುದಾಯಗಳ ಯಾವುದೇ ಸ್ವಾಮೀಜಿ ಕಿಂಚಿತ್ತೂ ಅನುಮಾನ ಬೇಡ. ನಿಮ್ಮ ಹೋರಾಟ ಸರಿಯಾಗಿರುವುದರಿಂದ ಮೀಸಲಾತಿ ಕಲ್ಪಿಸುವುದು ನಮ್ಮ ಉದ್ದೇಶ.ಈ ಬಗ್ಗೆ ತಜ್ಞರ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಕಂದಾಯ ಗ್ರಾಮ:

ರಾಜ್ಯದ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಬಂಜಾರ ಭಾಷಾ ಅಭಿವೃದ್ಧಿಗಾಗಿ ಬಂಜಾರ ಭಾಷಾ ಅಕಾಡಮಿ ಸ್ಥಾಪನೆ ಮಾಡಲಾಗಿದೆ. ಅಲ್ಲದೆ ಭಾಷಾ ಅಭಿವೃದ್ದಿಗಾಗಿ ಹಿರಿಯ ಸಾಹಿತಿ ಹಂ ಪಾ ನಾಗರಾಜಯ್ಯ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದರು.

ಪ್ರಮುಖ ಸುದ್ದಿ :-   ಬೆಂಗಳೂರಿನ ಮೂರು ಪ್ರತಿಷ್ಠಿತ ಹೋಟೆಲ್​ಗಳಿಗೆ ಬಾಂಬ್​ ಬೆದರಿಕೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement