ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ನಮ್ಮ ತಾಕತ್ತು ಏನು ಎಂಬುದನ್ನು ತೋರಿಸಬೇಕಿದೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಕಾರ್ಯಕರ್ತರಲ್ಲಿ ಕೋರಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್ ಸಮಾವೇಶವನ್ನು ಉದ್ಘಾಟಿಸಿದ ನಂತರ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕೆಂದು ಕಾರ್ಯಕರ್ತರು, ಮುಖಂಡರಲ್ಲಿ ಮನವಿ ಮಾಡಿದರು.
ನಾನು ಮುಂದೆ ನಿಮಗೆ ಮಾರ್ಗದರ್ಶನ ಮಾಡಬಹುದು ಎಲ್ಲ ಕಡೆ ಪ್ರವಾಸ ಮಾಡಲು ಸಾಧ್ಯವಿಲ್ಲ. ನಮ್ಮ ಪಕ್ಷದಲ್ಲಿ ಪ್ರಬಲವಾದ ಘಟಕಗಳು ಇವೆ, ಮುಂಬರುವ ರಾಜ್ಯದ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ನಮಗೆ ಬಹಳ ಮುಖ್ಯ, ನಾವು ಹಿಂದೆ ಬಿದ್ದಿಲ್ಲ ಎಂದು ಸಾಬೀತು ಪಡಿಸಬೇಕು ಎಂದು ತಿಳಿಸಿದರು.
ಬರುವ ಚುನಾವಣೆಯಲ್ಲಿ ನಮ್ಮ ಶಕ್ತಿ ಏನು ಎಂಬುದನ್ನು ತೋರಿಸಬೇಕಿದೆ. ಸೀಟು ಹಂಚಿಕೆ ಮಾಡುವಾಗ ಸಣ್ಣ ಪುಟ್ಟ ವ್ಯತ್ಯಾಸ ಆಗಬಹುದು, ಅದರ ಬಗ್ಗೆ ದಯವಿಟ್ಟು ಯಾರು ತಲೆ ಕೆಡಿಸಿಕೊಳ್ಳಬೇಡಿ. ನಾವೆಲ್ಲರೂ ಐಕ್ಯತೆಯಿಂದ ಕೆಲಸ ಮಾಡಬೇಕಿದೆ, ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷ ಅತಿ ಹೆಚ್ಚು ಸ್ಥಾನ ಗೆಲ್ಲಬೇಕು. ಜೊತೆಗೆ ನಮ್ಮ ಪ್ರಾದೇಶಿಕ ಪಕ್ಷವನ್ನು ಉಳಿಸಬೇಕು ಎಂದು ಕೋರಿದರು.
ನಿಮ್ಮ ಕಾಮೆಂಟ್ ಬರೆಯಿರಿ