ಮೈತ್ರಿ ಸಹವಾಸ ಸಾಕಾಗಿದೆ: ಜೆಡಿಎಸ್‌ ಮುಖಂಡ ಬಂಡೆಪ್ಪ ಕಾಶಂಪೂರ

posted in: ರಾಜ್ಯ | 0

ಬೆಂಗಳೂರು: ಬೇರೆ ಪಕ್ಷದವರ ಜೊತೆ ಮೈತ್ರಿ ಸಾಕಾಗಿದೆ. ನಮಗೆ ಯಾರ ಸಹವಾಸವೂ ಬೇಡ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪೂರ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಮೈತ್ರಿ ಸಹವಾಸ ಬೇಡ ಎಂದು ವರಿಷ್ಠರಿಗೆ ಮನವಿ ಮಾಡಿದ ಅವರು, ನಮಗೆ ಯಾರ ಸಹವಾಸವೂ ಬೇಡ. ಮುಂದಿನ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಗೆದ್ದು ಅಧಿಕಾರಕ್ಕೇರಲು ಶ್ರಮಿಸಬೇಕು ಎಂದರು.
ಕೆಲವರು ಜೆಡಿಎಸ್‌ ಎಲ್ಲಿದೆ ಎಂದು ಪ್ರಶ್ನಿಸುತ್ತಾರೆ. ಬೀದರ್‌ನಿಂದ ಚಾಮರಾಜನಗರವರೆಗೂ ಜೆಡಿಎಸ್‌ ಇದೆ. ವಿಧಾನಸೌಧದಲ್ಲಿ ಜೆಡಿಎಸ್ ಧ್ವಜ ಊರಲು ನಾವು ಪಣತೊಡಬೇಕು, 120 ಸ್ಥಾನಗಳನ್ನು ಗೆಲ್ಲಲು ನಾವು ಶ್ರಮಪಡಬೇಕು, ಶ್ರಮ ಹಾಕಿದ್ರೆ ಮುಂಬರುವ ಚುನಾವಣೆಯಲ್ಲಿ 120 ಸೀಟ್ ಗಳನ್ನು ಜೆಡಿಎಸ್ ಜಯಿಸಲು ಸಾಧ್ಯ ಎಂದು ತಿಳಿಸಿದರು.
ಕಾಂಗ್ರೆಸ್ 130 ರಿಂದ 78 ಸೀಟ್‌ಗಳಿಗೆ ಕುಸಿದಿದೆ. ಬಿಜೆಪಿ ಅವಧಿಯಲ್ಲಿ ಕೆಲಸಗಳಾಗುತ್ತಿಲ್ಲ, ಬಿಜೆಪಿ ಶಾಸಕರೇ ತಮ್ಮ ಕ್ಷೇತ್ರಗಳಿಗೆ ಹಣ ಕೊಡ್ತಿಲ್ಲ‌‌ ಅಂತ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂದು ಕಾಶಂಪೂರ ಅಭಿಪ್ರಾಯಪಟ್ಟರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ಮಂಡ್ಯ : ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಕಾರು, ನಾಲ್ವರು ಸ್ಥಳದಲ್ಲೇ ಸಾವು

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement