ರೈತರ ಹೋರಾಟಕ್ಕೆ ಮಹಾತ್ಮ ಗಾಂಧಿ ಮೊಮ್ಮಗಳು ತಾರಾ ಭಟ್ಟಾಚಾರ್ಜಿ ಬೆಂಬಲ

ಗಾಜಿಯಾಬಾದ್‌: ಮಹಾತ್ಮಾ ಗಾಂಧಿ ಮೊಮ್ಮಗಳು ತಾರಾ ಭಟ್ಟಾಚಾರ್ಜಿ ಕೇಂದ್ರ ಸರಕಾರದ ವಿವಾದಾತ್ಮಕ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.
ಗಾಜಿಯಾಬಾದ್‌ನಲ್ಲಿ ರೈತರು ನಡೆಸುತ್ತಿರುವ ಹೋರಾಟ ಸ್ಥಳಕ್ಕೆ ಭೇಟಿ ನೀಡಿದ ಅವರು, ಶಾಂತಿಯುತವಾಗಿ ಹೋರಾಟ ನಡೆಸುವಂತೆ ರೈತರಿಗೆ ಕರೆ ನೀಡಿದರು. ನಾನು ಯಾವುದೇ ರಾಜಕೀಯ ಪಕ್ಷದ ಪರವಾಗಿ ಇಲ್ಲಿಗೆ ಬಂದಿಲ್ಲ. ರೈತರು ಹೋರಾಟ ನಡೆಸುತ್ತಿರುವುದರಿಂದ ಅವರನ್ನು ಬೆಂಬಲಿಸಲು ಇಲ್ಲಿಗೆ ಬಂದಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ರಾಮಚಂದ್ರ ರಾಹಿ, ಅಖಿಲ ಭಾರತ ಸರ್ವ ಸೇವಾ ಸಂಘದ ವ್ಯವಸ್ಥಾಪಕ ಟ್ರಸ್ಟಿ ಅಶೋಕ ಶರಣ್‌, ಗಾಂಧಿ ಸ್ಮಾರಕ ನಿಧಿ ನಿರ್ದೇಶಕ ಸಂಜಯ ಸಿಂಘಾ, ರಾಷ್ಟ್ರೀಯ ಗಾಂಧಿ ವಸ್ತು ಸಂಗ್ರಹಾಲಯ ನಿರ್ದೇಶಕ ಎ. ಅಣ್ಣಾಮಲೈ ಉಪಸ್ಥಿತರಿದ್ದರು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement