ಸಂಘ ಪರಿವಾರ ಸಾಮಾಜಿಕ ನ್ಯಾಯ ಹೋರಾಟದ ದಾರಿ ತಪ್ಪಿಸುತ್ತಿದೆ: ಸಿದ್ದರಾಮಯ್ಯ ಆರೋಪ

posted in: ರಾಜ್ಯ | 0

ನಾವೆಲ್ಲ ಹಿಂದೂ ನಾವೆಲ್ಲ ಒಂದು ಎಂದು ಹೇಳುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ವಹಿಸುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೀಸಲಾತಿಯನ್ನು ನೇರವಾಗಿ ವಿರೋಧಿಸದ ಸಂಘ ಪರಿವಾರದ ಮುಖಂಡರು ಜಾತಿ ಜಾತಿಗಳ ಮಧ್ಯೆ ವಿವಾದ ಸೃಷ್ಟಿಸಿ ಸಾಮಾಜಿಕ ನ್ಯಾಯ ಹೋರಾಟದ ದಾರಿ ತಪ್ಪಿಸುತ್ತಿದ್ದಾರೆ. ಸಂಘ ಪರಿವಾರದ ಕುಟಿಲತೆಗೆ ಜನಸಾಮಾನ್ಯರು ಬಲಿಯಾಗಬಾರದು. ಮೊದಲಿನಿಂದಲೂ ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿರುವ ಬಿಜೆಪಿ ಮುಖಂಡರು ಈಗ ಮೀಸಲಾತಿಗಾಗಿ ಕೂಗೆಬ್ಬಿಸುತ್ತಿರುವುದು ಸಾಮಾಜಿಕ ನ್ಯಾಯ ಹೋರಾಟದ ದಿಕ್ಕು ತಪ್ಪಿಸುವ ಷಡ್ಯಂತ್ರದಂತೆ ಗೋಚರಿಸುತ್ತಿದೆ ಎಂದು ತಿಳಿಸಿದರು.
ಮೀಸಲಾತಿ ಹೆಚ್ಚಳಕ್ಕಾಗಿ ಆಧಾರ ಕೋರುತ್ತಿರುವ ನ್ಯಾಯಾಲಯಕ್ಕೆ ರಾಜ್ಯದಲ್ಲಿ ನಡೆದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಗಣತಿಯೇ ಉತ್ತರ. ಬಿಜೆಪಿ ಸರಕಾರ ಮೀಸಲಾತಿ ಪರವಾಗಿದ್ದರೆ, ಹಿಂದೆ ನಡೆಸಿದ್ದ ಸಮೀಕ್ಷೆಯ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದರು.
ಮೀಸಲಾತಿ ಪ್ರಮಾಣ ಹೆಚ್ಚಿಸುವುದಿದ್ದರೆ ತಮಿಳುನಾಡು ಮಾದರಿಯಲ್ಲಿ ಮೀಸಲಾತಿಯನ್ನು ಶೇ.೭೩ರಷ್ಟು ಹೆಚ್ಚಿಸಬೇಕು. ಹಿಂದಿನ ಕಾಂಗ್ರೆಸ್‌ ಸರಕಾರ ಮಾಡಿದ ಕಾನೂನಿನಿಂದ ಮಾತ್ರ ಸಮಸ್ಯೆಗೆ ಪರಿಹಾರ ದೊರಕಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ವೀಡಿಯೊ | ದಾವಣಗೆರೆಯಲ್ಲಿ ರೋಡ್‌ ಶೋ ವೇಳೆ ಪ್ರಧಾನಿ ಮೋದಿ ಭದ್ರತೆಯಲ್ಲಿ ಲೋಪ : ವಾಹನದತ್ತ ನುಗ್ಗಿದ ವ್ಯಕ್ತಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement