ಉಪ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಕಣಕ್ಕೆ: ಎಚ್‌ಡಿಕೆ

ಬೆಂಗಳೂರು: ಬಸವಕಲ್ಯಾಣ, ಮಸ್ಕಿ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.
ಅವರು ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿ, ಆರ್ಥಿಕ ಸಾಮರ್ಥ್ಯದ ಕೊರತೆಯಿಂದಾಗಿ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ನಿರ್ಧರಿಸಲಾಗಿತ್ತು. ಆದರೆ ಈಗ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಸೆಣೆಸಲಿದ್ದಾರೆ ಎಂದರು.
ಬಿಜೆಪಿಗೆ ಅನುಕೂಲ ಮಾಡಿಕೊಡಲು ಜೆಡಿಎಸ್‌ ಸ್ಪರ್ಧೆಯಿಂದ ದೂರ ಉಳಿದಿದೆ ಎಂಬ ಕಾಂಗ್ರೆಸ್‌ ಮುಖಂಡರು ಟೀಕೆಯನ್ನು ಖಂಡಿಸಿದ ಕುಮಾರಸ್ವಾಮಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ೨೨೪ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ತಿಳಿಸಿದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ನಿಮ್ಮ ಕಾಮೆಂಟ್ ಬರೆಯಿರಿ

advertisement