ಪರಿಶಿಷ್ಟ ಪಂಗಡ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದ ಕುರುಬರು ಮತ್ತೆ ಹೋರಾಟಕ್ಕೆ ಮುಂದಾಗಿದ್ದಾರೆ.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ ಹಾಗೂ ಸಮಾವೇಶ ನಡೆಸಿದ ಕುರುಬರು ಫೆ.೧೯ರಂದು ಬೆಂಗಳೂರಿನ ಮೌರ್ಯ ಹೊಟೇಲ್ ವೃತ್ತದ ಮಹಾತ್ಮ ಗಾಂಧಿ ಮೂರ್ತಿ ಎದುರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
ಕುಲಶಾಸ್ತ್ರ ಅಧ್ಯಯನದ ವರದಿಯನ್ನು ಪರಾಮರ್ಷಿಸಿ ಕೂಡಲೇ ಕೂಡಲೇ ಕೇಂದ್ರ ಸರಕಾರಕ್ಕೆ ಶಿಫಾರಸು ಕಳಿಸಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಡಿ. ವೆಂಕಟೇಶಮೂರ್ತಿ ತಿಳಿಸಿದ್ದಾರೆ.
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಎಚ್.ಕಾಂತರಾಜು ಅವರು ನೀಡಿದ ಜಾತಿಗಣತಿ ವರದಿಯನ್ನು ಕೂಡಲೇ ಬಿಡುಗಡೆ ಮಾಡಬೇಕು. ಕುರುಬರ ಪ್ರಾಧಿಕಾರ ರಚನೆ ಮಾಡಿ ೫೦೦ ಕೋಟಿ ರೂ. ಅನುದಾನ ನೀಡಬೇಕು ಎಂದು ಅವರು ಆಗ್ರಹಿಸಲು ಪ್ರತಿಭಟನೆ ನಡೆಸಲಾಗುವುದು ಎಂದರು.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ