ಬೆಂಗಳೂರು: ಕೃಷಿ ಇಲಾಖೆಯ ನೂತನ ರಾಯಭಾರಿಯಾಗಿ ಸ್ಯಾಂಡಲ್‌ವುಡ್ ನಟ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೃಷಿ ಇಲಾಖೆಯು ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳ ಪ್ರಚಾರ ಹಾಗೂ ಕೃಷಿಕರಲ್ಲಿ ಸ್ಪೂರ್ತಿ ತುಂಬಲು ಕನ್ನಡ ಚಲನಚಿತ್ರರಂಗದ ಪ್ರಸಿದ್ಧ ನಟರಾದ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಿಸಲಾಗಿದೆ. ಅವರು ಯಾವುದೇ ಸಂಭಾವನೆ ಇಲ್ಲದೆ ಹುದ್ದೆ ನಿರ್ವಹಿಸುವುದಾಗಿ ಒಪ್ಪಿಕೊಂಡಿರುತ್ತಾರೆ ಎಂದು ಕೃಷಿ ಇಲಾಖೆ ಪ್ರಕಟನೆ ತಿಳಿಸಿದೆ.
ಈ ಹಿಂದೆ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ನಟ ದರ್ಶನ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಆಗ ನಟ ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಕೊಂಡಿದ್ದರು. ಇದೀಗ ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ