ಟೂಲ್‌ಕಿಟ್‌ ಹಂಚಿಕೆ ಆರೋಪ ಇಬ್ಬರ ವಿರುದ್ಧ ವಾರಂಟ್‌

ಟೂಲ್‌ಕಿಟ್‌ ಹಂಚಿಕೆ ಕುರಿತು ದಿಶಾ ರವಿ ಬಂಧನದ ಮರುದಿನ ದೆಹಲಿ ಪೊಲೀಸರು ಇಬ್ಬರ ವಿರುದ್ಧ ಜಾಮೀನುರಹಿತ ವಾರಂಟ್‌ ಹೊರಡಿಸಿದ್ದಾರೆ.
ನಿಕಿತಾ ಜೇಕಬ್‌ ಹಾಗೂ ಶಾಂತನು ವಿರುದ್ಧ ವಾರಂಟ್‌ ಹೊರಡಿಸಲಾಗಿದೆ. ಶೀಘ್ರದಲ್ಲೇ ಇಬ್ಬರನ್ನೂ ಬಂಧಿಸಲಾಗುವುದು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
ಇಬ್ಬರೂ ದಾಖಲೆಗಳನ್ನು ಸಿದ್ಧಪಡಿಸುವಲ್ಲಿ ಪಾಲ್ಗೊಂಡಿದ್ದಾರೆ. ಖಲಿಸ್ತಾನ ಪರ ವ್ಯಕ್ತಿಗಳೊಂದಿಗೆ ನೇರ ಸಂಪರ್ಕದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
21 ವರ್ಷದ ಬೆಂಗಳೂರಿನ ಪರಿಸರ ದಿಶಾ ರವಿ ಬಂಧನದ ಬಗ್ಗೆ ಆಕ್ರೋಶ ಹೆಚ್ಚುತ್ತಿರುವ ಸಂದರ್ಭದಲ್ಲಿ ವಾರಂಟ್‌ಗಳು ಹೊರಬಿದ್ದಿವೆ. ದಿಶಾ ರವಿ ಟೂಲ್‌ಕಿಟ್‌ ಸಂಪಾದಿಸಿದ್ದಲ್ಲದೇ ಅದನ್ನು ಪ್ರಸಾರ ಮಾಡಲು ಸಹಕರಿಸಿದ್ದಾರೆ. ಟೂಲ್‌ಕಿಟ್‌ ಅನ್ನು ಗ್ರೆಟಾ ಥನ್‌ಬರ್ಗ್‌ ಅವರೊಂದಿಗೆ ಹಂಚಿಕೊಂಡಿದ್ದಲ್ಲದೇ ಪ್ರತ್ಯೇಕ ಖಲಿಸ್ಥಾನ ಹೋರಾಟಗಾರರೊಂದಿಗೆ ವ್ಯಾಟ್ಸಪ್‌ ಗ್ರೂಪ್‌ ಮಾಡಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.
ಫೆಬ್ರವರಿ 4 ರಂದು ದೆಹಲಿ ಪೊಲೀಸರ ಸೈಬರ್ ಸೆಲ್ ದೇಶದ್ರೋಹ, ಕ್ರಿಮಿನಲ್ ಪಿತೂರಿ ಮತ್ತು ದ್ವೇಷವನ್ನು ಉತ್ತೇಜಿಸುವ ವಿಭಾಗಗಳ ಅಡಿಯಲ್ಲಿ ಟೂಲ್‌ಕಿಟ್‌ ರಚಿಸಿದವರ ವಿರುದ್ಧ ಎಫ್ಐಆರ್ ದಾಖಲಿಸಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಅರ್ನಾಲ್ಟ್‌ ಹಿಂದಕ್ಕಿ ಪುನಃ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಎಲೋನ್‌ ಮಸ್ಕ್‌

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement