ಬಿಪಿಎಲ್‌ ನಿಯಮಾವಳಿಯಲ್ಲಿ ಬದಲಾವಣೆ ಮಾಡಿಲ್ಲ: ಸಚಿವ ಉಮೇಶ ಕತ್ತಿ

ಬೆಂಗಳೂರು: ಸರಕಾರ ಬಿಪಿಎಲ್‌ ಕಾರ್ಡ್‌ ನಿಯಮಾವಳಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ.
ಟಿವಿ, ಬೈಕ್‌, ಫ್ರಿಡ್ಜ್‌ ಇರುವವರ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲಾಗುವುದು ಎಂಬ ಸಚಿವರ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದಾರೆ. ಹಿಂದಿನ ಸರಕಾರಗಳು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳನ್ನು ಸಾರ್ವಜನಿಕ ಪಡಿತರ ವ್ಯವಸ್ಥೆಗೆ ಒಳಪಡಿಸಲು ನಾಲ್ಕು ಆದೇಶಗಳನ್ನು ಹೊರಡಿಸಿದ್ದವು. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರವಾಗಲಿ ಅಥವಾ ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕವಾಗಲೀ ಈ ನಿಯಮಾವಳಿಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಬಿಪಿಎಲ್‌ ಕಾರ್ಡ್‌ ಪಡೆಯಲು ಇರುವ ಮಾನದಂಡಗಳನ್ನು ಉಲ್ಲಂಘಿಸಿ ಹೆಚ್ಚಿನ ಸಂಖ್ಯೆಯ ಕುಟುಂಬಗಳು ಅನಧಿಕೃತವಾಗಿ ಬಿಪಿಎಲ್‌ ಕಾರ್ಡ್‌ ಹೊಂದಿರುವುದು ಸರಕಾರದ ಗಮನಕ್ಕೆ ಬಂದಿದೆ. ಅಂತಹ ಕುಟುಂಬಗಳಿಗೆ 2021ರ ಮಾರ್ಚ್‌ 31ರ ಒಳಗೆ ಬಿಪಿಎಲ್‌ ಕಾರ್ಡ್‌ನ್ನು ಸ್ವಯಂ ಪ್ರೇರಿತವಾಗಿ ಸರಕಾರಕ್ಕೆ ಹಿಂದಿರುಗಿಸುವಂತೆ ಮನವಿ ಮಾಡುತ್ತೇನೆ. ಒಂದು ವೇಳೆ ಕಾಲಾವಧಿಯೊಳಗೆ ಹಿಂತಿರುಗಿಸದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.

ಪ್ರಮುಖ ಸುದ್ದಿ :-   ಏಪ್ರಿಲ್‌ 18, 19ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement