ಮಾತುಕತೆಗೆ ಕೇಂದ್ರ ಸರಕಾರ ವಿಳಂಬ: ಸಂಯುಕ್ತ ಕಿಸಾನ್‌ ಮೋರ್ಚಾ ಆರೋಪ

ರೈತರೊಂದಿಗೆ ಮಾತುಕತೆಗೆ ಸಿದ್ಧ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಮಾತುಕತೆಗೆ ದಿನಾಂಕ ನಿಗದಿ ಮಾಡಲು ವಿಳಂಬ ಮಾಡುತ್ತಿದ್ದಾರೆ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಆರೋಪ ಮಾಡಿದೆ.
ಹೋರಾಟ ನಿರತ ರೈತರೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರಕಾರ ಬದ್ಧವಾಗಿದೆ ಎಂದು ಸಂಸತ್ತಿನಲ್ಲಿ ಹೇಳಿಕೆ ನೀಡುವ ಪ್ರಧಾನಿ ಮೋದಿ, ರೈತರನ್ನು ಮಾತುಕತೆಗೆ ಆಹ್ವಾನಿಸಲು ಹಿಂದೇಟು ಹಾಕುತ್ತಿದ್ದಾರೆ. ಕೇಂದ್ರ ಸರಕಾರದ ಮೊಂಡುತನವೇ ರೈತರ ಬಿಕ್ಕಟ್ಟಿಗೆ ಕಾರಣ. ಈವರೆಗೆ ೧೨ ಸುತ್ತುಗಳ ಮಾತುಕತೆ ನಡೆದಿದ್ದರೂ ಕನಿಷ್ಟ ಬೆಂಬಲ ಬೆಲೆ ಕುರಿತು ಕಾನೂನು ಮಾಡಲು ಸರಕಾರ ಆಸಕ್ತಿ ತೋರುತ್ತಿಲ್ಲ ಎಂದು ತಿಳಿಸಿದೆ.
ಸಂಯುಕ್ತ ಕಿಸಾನ್‌ ಮೋರ್ಚಾ ೪೦ ರೈತ ಸಂಘಟನೆಗಳ ಒಕ್ಕೂಟವಾಗಿದ್ದು, ಮೂರು ನೂತನ ಕೃಷಿ ಕಾನೂನುಗಳನ್ನು ಖಂಡಿಸಿ ನಡೆಯುತ್ತಿರುವ ರೈತ ಹೋರಾಟದ ನೇತೃತ್ವ ವಹಿಸಿಕೊಂಡಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement