ಯಡಿಯೂರಪ್ಪ ಕುಟುಂಬದ ಮಾರಿಷಿಸ್‌ ಪ್ರವಾಸದ ಗುಟ್ಟು ರಟ್ಟಾಗಬೇಕು: ಯತ್ನಾಳ

posted in: ರಾಜ್ಯ | 0

ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಇತ್ತೀಚಿಗೆ ಮಾರಿಷಿಸ್‌ಗೆ ವಿಮಾನದಲ್ಲಿ ಯಾಕೆ ಹೋಗಿತ್ತು? ಅಲ್ಲಿ ಏನು ಹಣದ ವ್ಯವಹಾರ ನಡೆದಿದೆ ಎಂಬುದು ರಾಜ್ಯದ ಜನರಿಗೆ ತಿಳಿಯಬೇಕು ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ ಯತ್ನಾಳ ತಿಳಿಸಿದ್ದಾರೆ.
ಸತ್ಯ ಸಂಗತಿ ಜನರ ಎದುರು ಬರಬೇಕು ಎಂದು ಆಗ್ರಹಿಸಿದರು. ಯಡಿಯೂರಪ್ಪ ಅವರ ಕುಟುಂಬದ ಸದಸ್ಯರೇ ಅವರಿಗೆ ಹಾವು, ಚೇಳುಗಳಾಗಿ ಕಾಡುತ್ತಿದ್ದಾರೆ. ಯಡಿಯೂರಪ್ಪ ಮುಕ್ತವಾಗಿ ಕೆಲಸ ಮಾಡಲು ಅವರ ಪುತ್ರ ವಿಜಯೇಂದ್ರ ಬಿಡುತ್ತಿಲ್ಲ ಎಂದು ಆರೋಪ ಮಾಡಿದರು.
ಕುಟುಂಬದ ಸದಸ್ಯರಿಂದಲೇ ಯಡಿಯೂರಪ್ಪಗೆ ಮುಕ್ತವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ವಿಜಯೇಂದ್ರನ ಕೈಕಾಲು ಒತ್ತುವವರಿಗೆ, ಅವರ ಬೇಕು-ಬೇಡ ನೋಡಿಕೊಳ್ಳುವವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಪಕ್ಷದ ನಿಷ್ಠಾವಂತರನ್ನು ಕಡೆಗಣಿಸಲಾಗಿದೆ ಎಂದರು.
ಹಾವು, ಚೇಳುಗಳ ಮಧ್ಯೆ ಯಡಿಯೂರಪ್ಪ ಜೀವನ ನಡೆಸಬೇಕಾಗಿದೆ ಎಂದು ವಿಜಯೇಂದ್ರ ಹೇಳಿಕೆ ನೀಡಿದ ನಂತರ ಯತ್ನಾಳ ಹೇಳಿಕೆ ಮಹತ್ವ ಪಡೆದುಕೊಂಡಿದೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   2022ರಲ್ಲಿ ಬೆಂಗಳೂರು ವಿಮಾನ ನಿಲ್ದಾಣದಿಂದ 2.75 ಕೋಟಿ ಮಂದಿ ಪ್ರಯಾಣ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement