ರಾಮಮಂದಿರ ನಿರ್ಮಾಣಕ್ಕೆ ಹಣ ಕೊಡದವರ ಮನೆಗಳ ಗುರುತು: ಎಚ್​ಡಿಕೆ ಆತಂಕ

posted in: ರಾಜ್ಯ | 0

ಬೆಂಗಳೂರು: ‘ರಾಮಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ ಮತ್ತು ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಏಕೆ ಹೀಗೆ ಮಾಡುತ್ತಿದ್ದಾರೆ ಎಂದು ಮಾತ್ರ ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುಲಿದೆ’ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ವಿಎಚ್​ಪಿ(ವಿಶ್ ಹಿಂದು ಪರಿಷತ್​) ಜ.15ರಂದು ಆರಂಭಿಸಿದ ನಿಧಿ ಸಮರ್ಪಣಾ ಅಭಿಯಾನಕ್ಕೆ ಎಲ್ಲೆಡೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದ್ದು, ಕೋಟ್ಯಂತಹ ಹಣ ಸಂಗ್ರಹ ಆಗುತ್ತಿದೆ. ಇಂತಹ ಸಂದರ್ಭದಲ್ಲಿ ಸೋಮವಾರ(ಫೆ.15) ಟ್ವೀಟ್ ಮೂಲಕ ಕಳವಳ ವ್ಯಕ್ತಪಡಿಸಿರುವ ಎಚ್​ಡಿಕೆ, ‘ಯಾರೊಬ್ಬರೂ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಮಾಧ್ಯಮಗಳು ಸರ್ಕಾರದ ಭಾವನೆಗಳನ್ನು ಎತ್ತಿಹಿಡಿದರೆ ಯಾರಿಗೆ ಏನಾಗುತ್ತದೆಯೋ ಗೊತ್ತಿಲ್ಲ. ವಾತಾವರಣವನ್ನು ನೋಡಿದಾಗ ದೇಶದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಂತೂ ನಿಚ್ಚಳವಾಗಿದೆ’ ಎಂದು ಎಚ್​ಡಿಕೆ ಸರಣಿ ಟ್ವೀಟ್​ ಮಾಡಿದ್ದಾರೆ.

‘ದೇಶದಲ್ಲಿ ಮೂಲಭೂತ ಹಕ್ಕನ್ನೇ ಕಸಿಯಲಾಗುತ್ತಿದೆ. ಸ್ವತಂತ್ರವಾಗಿ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇದು ಅಘೋಷಿತ ತುರ್ತು ಪರಿಸ್ಥಿತಿ’ ಎಂದು ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಸರ್ಕಾರದ ‘ಉಚಿತ ವಿದ್ಯುತ್ʼ ಯೋಜನೆಗೆ ಷರತ್ತುಗಳೇನು ? ನೊಂದಣಿ ಹೇಗೆ ? : ಇಲ್ಲಿದೆ ಮಾಹಿತಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement