ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಸಿಎಂ ಯಡಿಯೂರಪ್ಪ ಚಾಲನೆ

ವಿಜಯಪುರ ಸಮೀಪದ ಮದಬಾವಿಯಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನಡೆಯಿತು.
ಸಿಎಂ ಯಡಿಯೂರಪ್ಪ ವರ್ಚುವಲ್‌ ತಂತ್ರಜ್ಞಾನದ ಮೂಲಕ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಿದರು. ಅವರು ಮಾತನಾಡಿ, ಐತಿಹಾಸಿಕ ಕೇಂದ್ರ, ತೋಟಗಾರಿಕೆ ಉತ್ಪನ್ನಗಳಿಗೆ ಪ್ರಸಿದ್ಧಿಗಳಿಸಿದ ವಿಜಯಪುರದಲ್ಲಿ ವಿಮಾನ ನಿಲ್ದಾಣದಿಂದ ಪ್ರವಾಸೋದ್ಯಮ ಬೆಳವಣಿಗೆ ಹಾಗೂ ರಫ್ತು ಉತ್ತೇಜನಕ್ಕೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಮದಬಾವಿಯಲ್ಲಿ ೭೨೭ ಎಕರೆ ಭೂಮಿಯಲ್ಲಿ ೨೨೦ ಕೋಟಿ ರೂ. ಮೊತ್ತದಲ್ಲಿ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ನಿರ್ಮಾಣಗೊಳ್ಳಲಿದ್ದು, ಮೊದಲ ಹಂತದಲ್ಲಿ ೯೫ ಕೋಟಿ ರೂ. ಕಾಮಗಾರಿ ನಡೆಯಲಿದೆ ಎಂದು ಯಡಿಯೂರಪ್ಪ ಹೇಳಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕ ದೇವೆಂದ್ರ ಚವ್ಹಾಣ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ, ವಿಧಾನ ಪರಿಷತ್‌ ಸದಸ್ಯ ಅರುಣ ಶಹಾಪುರ, ಸಂಸದ ರಮೇಶ ಜಿಗಜಿಣಗಿ, ಬಿ.ವೈ.ರಾಘವೇಂದ್ರ, ಜಿ.ಪಂ. ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಮೊದಲಾದವರಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement