ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ದೆಹಲಿಗೆ ತೆರಳಲಿದ್ದು, ಪಕ್ಷದ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ.
ದಿಢೀರ್ ಆಗಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯನ್ನು ಭೇಟಿ ಮಾಡುತ್ತಿರುವುದು ರಾಜ್ಯ ಕಾಂಗ್ರೆಸ್ ವಲಯದಲ್ಲಿ ಕುತೂಹಲ ಮೂಡಿಸಿದೆ. ಮಂಗಳವಾರ ಬೆಳಗ್ಗೆ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.
ಸಿಎಂ ಯಡಿಯೂರಪ್ಪ ಸರ್ಕಾರದಲ್ಲೂ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿದೆ. ಬಿಜೆಪಿಯ ಕೆಲ ಮುಖಂಡರೇ ಮುಕ್ತವಾಗಿ ಸರಕಾರವನ್ನು ಟೀಕಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯನ್ನು ಭೇಟಿ ಮಹತ್ವ ಪಡೆದಿದೆ. ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಕುರಿತಾಗಿ ಸಾಕಷ್ಟು ಗೊಂದಲ ಸೃಷ್ಟಿಯಾಗಿದ್ದು ಈ ವಿಷಯವನ್ನೂ ರಾಹುಲ್ ಗಾಂಧಿ ಅವರೊಂದಿಗೆ ಸಿದ್ದರಾಮಯ್ಯ ಚರ್ಚಿಸುವ ಸಾಧ್ಯತೆಯಿದೆ.
ನಿಮ್ಮ ಕಾಮೆಂಟ್ ಬರೆಯಿರಿ