ನೆರೆ ದೇಶಗಳಲ್ಲೂ ಬಿಜೆಪಿ ಸರಕಾರ: ತ್ರಿಪುರ ಸಿಎಂ ವಿವಾದಾತ್ಮಕ ಹೇಳಿಕೆ

ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್‌ ಶಾ ನೆರೆ ದೇಶಗಳಾದ ನೇಪಾಳ ಹಾಗೂ ಶ್ರೀಲಂಕಾದಲ್ಲಿ ಬಿಜೆಪಿ ಸರಕಾರ ರಚನೆಯ ಉದ್ದೇಶ ಹೊಂದಿದ್ದಾರೆ ಎಂದು ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್‌ ಕುಮಾರ್‌ ದೇಬ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದೇಶದಲ್ಲಿ ಮಾತ್ರವಲ್ಲದೇ ನೇಪಾಳ ಹಾಗೂ ಶ್ರೀಲಂಕಾದಲ್ಲಿ ಬಿಜೆಪಿಯನ್ನು ಸಂಘಟಿಸಿ ಅಲ್ಲಿ ಬಿಜೆಪಿ ಸರಕಾರ ರಚನೆ ಮಾಡುವ ಉದ್ದೇಶ ಅಮಿತ್‌ ಶಾ ಅವರಿಗಿದೆ ಎಂದರು. ತ್ರಿಪುರ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ರಾಜ್ಯಕ್ಕೆ ಬಂದಿದ್ದ ಅಮಿತ್‌ ಶಾ ನಮ್ಮ ದೇಶವಲ್ಲದೇ ನೆರೆ ದೇಶಗಳಲ್ಲಿಯೂ ಬಿಜೆಪಿ ಸಂಘಟಿಸಿ ಸರಕಾರ ರಚನೆ ಮಾಡುವ ಬಗ್ಗೆ ಮಾತನಾಡಿದ್ದರು ಎಂದು ದೇಬ್‌ ಹೇಳಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಜ್ ಠಾಕ್ರೆ ಸಂಕಲ್ಪ, ಉದ್ಧವರಿಂದ ದೊಡ್ಡ ಸುಳಿವು : 20 ವರ್ಷಗಳ ನಂತರ ಠಾಕ್ರೆ ಸಹೋದರರ ಪುನರ್ಮಿಲನ

ನಿಮ್ಮ ಕಾಮೆಂಟ್ ಬರೆಯಿರಿ

advertisement